Billava Warriors – Billava News Portal
Wednesday, 28 October 2026
General News

ಉದ್ಯೋಗ ಕಳೆದುಕೊಂಡವರಿಗೆ ಉದ್ಯೋಗ ಕಲ್ಪಿಸಿ ಮಾನವೀಯತೆ ಮೆರೆದ ಪ್ರತಿಭಾ ಕುಳಾಯಿ.

27 Nov 2023
ಉದ್ಯೋಗ ಕಳೆದುಕೊಂಡವರಿಗೆ ಉದ್ಯೋಗ ಕಲ್ಪಿಸಿ ಮಾನವೀಯತೆ ಮೆರೆದ ಪ್ರತಿಭಾ ಕುಳಾಯಿ.

ಮಂಗಳೂರು: ಸುರತ್ಕಲ್ ಟೋಲ್ ಡಿ.1ರಿಂದ ರದ್ದಾಗಿದ್ದುಉದ್ಯೋಗ ಕಳೆದುಕೊಂಡ ಟೋಲ್ ಕಾರ್ಮಿಕರಿಗೆಕೆಪಿಸಿಸಿ ಸಂಯೋಜಕಿಪ್ರತಿಭಾ ಕುಳಾಯಿ ಉದ್ಯೋಗದ ವ್ಯವಸ್ಥೆ ಮಾಡಿದ್ದಾರೆ.

ಟೋಲ್ ತೆರವು ಹಿನ್ನೆಲೆ ಉದ್ಯೋಗ ಕಳೆದುಕೊಂಡವರಲ್ಲಿ 22 ಮಂದಿ ಯುವಕ ಯುವತಿಯರು ಪ್ರತಿಭಾ ಕುಳಾಯಿ ಅವರನ್ನು ಭೇಟಿಮಾಡಿದ್ದಾರೆ. ಭೇಟಿ ಮಾಡಿದವರಿಗೆ ಉದ್ಯೋಗದ ವ್ಯವಸ್ಥೆ ಮಾಡಿರುವುದಾಗಿ ಪ್ರತಿಭಾ ಕುಳಾಯಿ ಫೇಸ್ ಬುಕ್ ಪೋಸ್ಟ್ ನಲ್ಲಿಹೇಳಿದ್ದಾರೆ.

ಪ್ರತಿಭಾ ಫೋಸ್ಟ್ ನಲ್ಲಿ ಏನೇನಿದೆ..? ಸುರತ್ಕಲ್ ಟೋಲ್ ಗೇಟ್ ನಲ್ಲಿ ಉದ್ಯೋಗ ಕಳೆದುಕೊಂಡ 35 ಮಂದಿಯನ್ನು ನಾನುಭೇಟಿಯಾಗಿ ಅವರಿಗೆ ಅವರ ವಿದ್ಯಾರ್ಹತೆಗೆ ಅನುಸಾರವಾಗಿ ಉದ್ಯೋಗ ದೊರಕಿಸಿಕೊಡುವ ಭರವಸೆ ನೀಡಿದ್ದು ಅದರಂತೆ ಇಂದುಬೆಳಗ್ಗಿನಿಂದ ನನ್ನ ಕಚೇರಿಯಲ್ಲಿ ಕಾರ್ಯ ನಿರತಳಾಗಿದ್ದೇನೆ. ಟೋಲ್ ಇನ್ ಚಾರ್ಜ್ ಮಿಥುನ್ ಬೈಕಂಪಾಡಿ ಸೂಕ್ತ ರೀತಿಯಲ್ಲಿಸ್ಪಂದಿಸಿದ್ದು ಈಗಾಗಲೇ 22 ಮಂದಿ ನನ್ನನ್ನು ಭೇಟಿಯಾಗಿ ಬಹುಪಾಲು ಯುವಕ-ಯುವತಿಯರಿಗೆ ಬೇರೆ ಬೇರೆ ಸಂಸ್ಥೆಗಳಲ್ಲಿ ಸೂಕ್ತಉದ್ಯೋಗ ಕಲ್ಪಿಸುವಲ್ಲಿ ಯಶಸ್ವಿಯಾಗಿದ್ದೇನೆ.

ಉದ್ಯೋಗ ಕಳೆದುಕೊಂಡವರಲ್ಲಿ ಒಬ್ಬ ವಿದ್ಯಾರ್ಥಿಯಾಗಿದ್ದು ಆತನ ಮನೆಯ ಪರಿಸ್ಥಿತಿ ತೀರಾ ಹದಗೆಟ್ಟಿರುವ ಕಾರಣ ಹಗಲುಕೆಪಿಟಿಯಲ್ಲಿ ಕಲಿತು ರಾತ್ರಿ ಟೋಲ್ ನಲ್ಲಿ ಕೆಲಸ ಮಾಡುತ್ತಿದ್ದ.ಆತನನ್ನು ನನ್ನ ಕುಳಾಯಿ ಫೌಂಡೇಶನ್ ಮೂಲಕ ದತ್ತು ಪಡೆದುಶಿಕ್ಷಣದ ಖರ್ಚು ವೆಚ್ಚ ನೋಡಿಕೊಳ್ಳುವ ಜೊತೆಗೆ ಉದ್ಯೋಗಕ್ಕೆ ವ್ಯವಸ್ಥೆ ಮಾಡಿದ್ದೇನೆ. ಇನ್ನೊಬ್ಬ ಮಹಿಳೆ ಟೋಲ್ ನಲ್ಲಿ ದುಡಿದು ತನ್ನಮಕ್ಕಳನ್ನು ಸಾಕುತ್ತಿದ್ದು ಆಕೆಗೆ ಸೂಕ್ತ ಉದ್ಯೋಗ ಕೊಡಿಸಿ ಮಕ್ಕಳನ್ನು ಶೈಕ್ಷಣಿಕ ದತ್ತು ಪಡೆಯಲಿದ್ದೇನೆ ಎಂದು ಹೇಳಿದ್ದಾರೆ.

ಕುಳಾಯಿ ಫೌಂಡೇಶನ್ ಮೂಲಕ ಈಗಾಗಲೇ 500ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಶೈಕ್ಷಣಿಕ ದತ್ತು ಪಡೆಯಲಾಗಿದ್ದು ಈ ವರ್ಷಇನ್ನಷ್ಟು ಮಕ್ಕಳನ್ನು ಶಿಕ್ಷಣದ ಉದ್ದೇಶದಿಂದ ದತ್ತು ಪಡೆಯಲಿದ್ದೇನೆ. ನಾನು ಭರವಸೆಗಳನ್ನು ಮಾತ್ರ ಕೊಡುವುದಿಲ್ಲ, ನುಡಿದಮಾತಿನಂತೆ ನಡೆಯುತ್ತೇನೆ. ಈ ಕುರಿತು ಇನ್ನಷ್ಟು ಮಾಹಿತಿ ಮುಂದಿನ ದಿನಗಳಲ್ಲಿ ನಿಮ್ಮೆದುರು ನೀಡಲಿದ್ದೇನೆ ಎಂದು ಬರೆದಿದ್ದಾರೆ.

ಸುರತ್ಕಲ್ ಟೋಲ್ ಗೇಟ್ ನಲ್ಲಿ ಉದ್ಯೋಗ ಕಳೆದುಕೊಂಡರೆ ಅವರಿಗೆ ಅವರ ವಿದ್ಯಾರ್ಹತೆಗೆ ಅನುಸಾರವಾಗಿ ಉದ್ಯೋಗದೊರಕಿಸಿಕೊಡುವ ಭರವಸೆಯನ್ನು ಈ ಮೊದಲು ಪ್ರತಿಭಾ ಕುಳಾಯಿ ನೀಡಿದ್ದರು.

Related news

General

Test

28 Oct 2026

test

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್