Billava Warriors – Billava News Portal
Thursday, 29 October 2026
Advertiser
Advertisement · 728×90 px
General News

"ಎಲ್ಲಿ ಸ್ತ್ರೀ ಶಕ್ತಿಯನ್ನು ಪೂಜಿಸುತ್ತಾರೋ ಅಲ್ಲಿ ದೈವಿಕ ಶಕ್ತಿ ನೆಲೆಸುತ್ತದೆ" : ಬರಹ - ರಶ್ಮಿ ಸನಿಲ್ ಮಂಗಳೂರು

27 Nov 2023
"ಎಲ್ಲಿ ಸ್ತ್ರೀ ಶಕ್ತಿಯನ್ನು ಪೂಜಿಸುತ್ತಾರೋ ಅಲ್ಲಿ ದೈವಿಕ ಶಕ್ತಿ ನೆಲೆಸುತ್ತದೆ" : ಬರಹ - ರಶ್ಮಿ ಸನಿಲ್ ಮಂಗಳೂರು
Advertiser
Advertisement · 728×90 px

"ಎಲ್ಲಿ ಸ್ತ್ರೀ ಶಕ್ತಿಯನ್ನು ಪೂಜಿಸುತ್ತಾರೋ ಅಲ್ಲಿ ದೈವಿಕ ಶಕ್ತಿ ನೆಲೆಸುತ್ತದೆ" ಎಂಬ ನಂಬಿಕೆ ಇರುವ ದೇಶ ಭಾರತ. ಆದರೆ, ಇಂದು ವಿಶ್ವದಲ್ಲೇ ಮಹಿಳೆಯರಿಗೆ ಭಾರತ ಅತ್ಯಂತ ಅಪಾಯಕಾರಿ ದೇಶ. ಅದಕ್ಕೆ ಕಾರಣ ಇತ್ತೀಚೆಗೆ ಮಹಿಳೆಯರ ಮೇಲೆ ನಡೆಯುತ್ತಿರುವ ಭೀಕರ ಅತ್ಯಾಚಾರಗಳು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯಗಳು.

ಭಾರತದಲ್ಲಿ ಪ್ರತಿ ಒಂದು ಗಂಟೆಗೆ ನಾಲ್ಕು ಅತ್ಯಾಚಾರ ಪ್ರಕರಣ ದಾಖಲಾಗುತ್ತಿದೆಯಂತೆ. ದಾಖಲಾಗದೆ ಉಳಿದ ಅತ್ಯಾಚಾರಗಳನ್ನು ಪರಿಗಣಿಸಿದರೆ ಗಂಟೆಗೆ ೧೦ಕ್ಕೂ ಹೆಚ್ಚು ಅತ್ಯಾಚಾರಗಳಾಗುತ್ತಿವೆ ಎಂಬುದು ಆತ್ಮವನ್ನೇ ಹಿಸುಕಿ ಹಾಕುವ ಕಠೋರ ಸತ್ಯ.

 

ಭಾರತದಲ್ಲಿ ಪ್ರಮುಖವಾಗಿ ಮಹಿಳೆಯರ ಮೇಲೆ ಮೂರು ವಿಧದ ದೌರ್ಜನ್ಯಗಳು ನಡೆಯುತ್ತಿವೆ. ಮೊದಲನೆಯದು ಲೈಂಗಿಕ ಅತ್ಯಾಚಾರ, ಎರಡನೆಯದು ಧಾರ್ಮಿಕ ಮತ್ತು ಸಂಪ್ರದಾಯಗಳ ಹೆಸರಿನಲ್ಲಿ ಆಗುತ್ತಿರುವ ದೌರ್ಜನ್ಯ, ಮೂರನೆಯದ್ದು ಲೈಂಗಿಕ ಗುಲಾಮರನ್ನಾಗಿ ಮಾಡಿಕೊಳ್ಳಲು ಮಾನವ ಕಳ್ಳ ಸಾಗಣೆ ಮಾಡುವುದು ಕೂಡ ಭಾರತದಲ್ಲಿಯೇ ಹೆಚ್ಚಂತೆ.

 

ವಿಶ್ವದಲ್ಲಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ಹೊಂದಿರುವ ಹಾಗೂ ಬಾಹ್ಯಾಕಾಶ ವಿಜ್ಞಾನದಲ್ಲಿ ಮುಂಚೂಣಿಯಲ್ಲಿರುವ ಭಾರತ ಮಹಿಳಾ ಸುರಕ್ಷತೆ ವಿಷಯದಲ್ಲಿ ಮಾತ್ರ ಇಡೀ ವಿಶ್ವದ ಮುಂದೆ ತಲೆ ತಗ್ಗಿಸುವಂತಾಗಿದೆ.

 

ಮಹಿಳೆಯನ್ನು ಪೂಜ್ಯನೀಯ ಭಾವನೆಯಲ್ಲಿ ಕಂಡು ಪೂಜಿಸುವ ದೇಶ ನಮ್ಮದು ಎನ್ನುವ ಹೆಮ್ಮೆಯ ಮಾತಿಗೆ ಕಳಂಕ ತರುವ ಕಾರ್ಯವನ್ನು ಇಂದು ಕೆಲವೊಂದು ಕಾಮ ಪಿಶಾಚಿಗಳು ಹಾಗೂ ದುಷ್ಟ, ದುಷ್ಕರ್ಮಿಗಳು ಎಸಗಿ ಹೂವಿನಂತಹ ಹೆಣ್ಣಿಗೆ ಮಾತ್ರ ಲೋಕದ ಕಟ್ಟು ಪಾಡು ಎನ್ನುವಂತೆ ಮಾಡಿದ್ದಾರೆ. ಮನೆಯ ಮಗನಿಗೆ ಬುದ್ಧಿ ಹೇಳಿದರೆ ಇಂದು ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ. ಯಾಕೆಂದರೆ ಇಂದು ಹೆಣ್ಣನ್ನು ಅವಳು ತೊಡುವ ಬಟ್ಟೆಯಿಂದ ಅಳೆಯಲಾಗುತ್ತಿದೆ. ಆದರೆ ಅತ್ಯಾಚಾರ ಆದ ಪ್ರಕರಣಗಳಲ್ಲಿ ಅಪ್ರಾಪ್ತ ಬಾಲಕಿಯರ ಸಂಖ್ಯೆಯೂ ಹೆಚ್ಚಾಗಿದೆ. ಹೊರದೇಶಗಳಲ್ಲಿ ಅರೆಬರೆ ಬಟ್ಟೆ ತೊಟ್ಟರೂ ಅತ್ಯಾಚಾರದ ಸಂಖ್ಯೆ ಕಡಿಮೆ. ಹಾಗಾದರೆ ಇಲ್ಲಿ ಯಾರ ತಪ್ಪಿದೆ ಹೇಳಿ? ನೋಡುವವರ ದೃಷ್ಟಿ ಸರಿ ಇದ್ದರೆ ಎಲ್ಲವೂ ಪೂಜ್ಯನೀಯ ಅಲ್ಲವೇ? ಅದಕ್ಕಾಗಿ ಮನೆಯಿಂದಲೇ ಇದರ ಅರಿವು ಮೂಡಿಸಬೇಕು. ಮನೆಯಲ್ಲಿ ಹಿರಿಯರು ತಮ್ಮ ಮಕ್ಕಳಿಗೆ ಬುದ್ಧಿ ಹೇಳಿದರೆ ಬೇರೊಬ್ಬರಿಗೆ ಉಪದೇಶ ನೀಡುವ ಅಗತ್ಯ ಬರುವುದಿಲ್ಲ. ಅತ್ಯಾಚಾರ, ಲೈಂಗಿಕ ಶೋಷಣೆಯಂತಹ ಅಮಾನವೀಯ, ದುಷ್ಕೃತ್ಯಗಳು ಸ್ವಲ್ಪ ಮಟ್ಟಿಗೆಯಾದರೂ ಕಡಿಮೆಯಾಗಬಹುದು.

​

Related news

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ
General

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ

28 Oct 2026

ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್