Billava Warriors – Billava News Portal
Friday, 30 October 2026
Advertiser
Advertisement · 728×90 px
General News

ಕುದ್ರೋಳಿಯ ಕ್ಷೇತ್ರದ ನವರಾತ್ರಿ ಮೂರ್ತಿಗಳಿಗೆ ಜೀವ ತುಂಬುವ ಕಲಾವಿದ ಕುಬೇರ ಮತ್ತು ತಂಡ

27 Nov 2023
ಕುದ್ರೋಳಿಯ ಕ್ಷೇತ್ರದ ನವರಾತ್ರಿ ಮೂರ್ತಿಗಳಿಗೆ ಜೀವ ತುಂಬುವ ಕಲಾವಿದ ಕುಬೇರ ಮತ್ತು ತಂಡ
Advertiser
Advertisement · 728×90 px

ಕುದ್ರೋಳಿಯ ಕ್ಷೇತ್ರದ ನವರಾತ್ರಿ ಮೂರ್ತಿಗಳಿಗೆ ಜೀವ ತುಂಬುವ ಕಲಾವಿದ "ಕುಬೇರ" ಮತ್ತು ತಂಡ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ "ಮಂಗಳೂರು ದಸರಾ" ಸಂಭ್ರಮಕ್ಕೆ ಮೆರಗು ನೀಡುವ ಗಣಪತಿ,ಆದಿಶಕ್ತಿ, ನವದುರ್ಗೆಯರು ಹಾಗೂ ಶಾರದಾಮಾತೆಯ ಮಣ್ಣಿನ‌ ಮೂರ್ತಿಗಳಿಗೆ ಜೀವ ತುಂಬುವ ಕಲೆಗಾರರ ಬಗ್ಗೆ ಹೆಚ್ಚಿನವರಿಗೆ ತಿಳಿದಿಲ್ಲ.ಈ ಕ್ಷೇತ್ರದಲ್ಲಿ ಪ್ರತಿಷ್ಠಾಪನೆಗೊಳ್ಳುವ ಮೂರ್ತಿಗಳನ್ನು ನೋಡಿ ಕಲಾವಿದನ ಕೈಚಳಕಕ್ಕೆ ಎಲ್ಲರೂ ಸೈ ಅನ್ನುತ್ತಾರೆ.ಆ ಕಲಾವಿದರು ಕಲೆಯ ಹಿಂದೆ ಇರುತ್ತಾರೆಯೇ ಹೊರತು ಎಲ್ಲೂ ಕಾಣಿಸಿಕೊಳ್ಳೋದಿಲ್ಲ. ಕುದ್ರೋಳಿ ಕ್ಷೇತ್ರದಲ್ಲಿ ನವರಾತ್ರಿ ಉತ್ಸವದ ಆರಂಭದ ದಿನಗಳಲ್ಲಿ ರಾಜಶೇಖರ್ ಹಾಗೂ ಅವರ ತಂಡದವರು ಮೂರ್ತಿ ರಚನೆ ಮಾಡುತ್ತಿದ್ದರು.ಅದೇ ತಂಡದಲ್ಲಿ ಕಲಾವಿದನಾಗಿ ತನ್ನ 13 ವರ್ಷದ ಪ್ರಾಯದಲ್ಲೇ ಕೆಲಸ ಆರಂಭಿಸಿದ್ದ ಅದ್ಭುತ ಕಲಾವಿದ ಶಿವಮೊಗ್ಗದ ಕುಬೇರ ಹಾಗೂ ಅವರ ಬಳಗ ಕಳೆದ ನಾಲ್ಕು ವರ್ಷದಿಂದ ನವರಾತ್ರಿಯ ಎಲ್ಲಾ 12 ಮೂರ್ತಿಗಳನ್ನು ರಚಿಸುತ್ತಾರೆ.ದೇವತಾ ಸ್ವರೂಪವಾದ ಈ ಮೂರ್ತಿಗಳನ್ನು ರಚಿಸುವಾಗ ಈ ಎಲ್ಲಾ ಕಲಾವಿದರು ಶ್ರದ್ಧೆ, ನಿಷ್ಠೆ, ಭಕ್ತಿಯ ಜೊತೆ ವೃತಾಚರಣೆ , ಜಪವನ್ನು ಮಾಡಿ ಮೂರ್ತಿಗಳನ್ನು ರಚಿಸುತ್ತಾರೆ. ಸುಮಾರು 40 ದಿನಗಳ ಕಾಲ ರಾತ್ರಿ-ಹಗಲು ಈ 12 ಮೂರ್ತಿಗಳನ್ನು 15 ಮಂದಿ ಕಲಾವಿದರು ಸೇರಿ ಮೂರ್ತಿಗಳ ರಚನೆ ಮಾಡುತ್ತಾರೆ.ಪ್ರತೀ ವರ್ಷವೂ ವಿಸರ್ಜನೆಗೊಳ್ಳುವ ಈ ಮೂರ್ತಿಗಳು ಮತ್ತೆ ಮುಂದಿನ ವರ್ಷ ಪ್ರತ್ಯಕ್ಷವಾಗಿದೆಯೇ ಅನ್ನುವಷ್ಟರ ಮಟ್ಟಿಗೆ ಅಷ್ಟೇ ಸುಂದರವಾಗಿ ಈ ಕಲಾವಿದರ ತಂಡ ಮೂರ್ತಿಗಳನ್ನು ರಚಿಸುತ್ತಾರೆ. ಇಂತಹ ಅದ್ಬುತ ಕಲಾವಿದರಿಗೊಂದು ಸೆಲ್ಯೂಟ್.
✍️ಸುಖ್ ಪಾಲ್ ಪೊಳಲಿ

Related news

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ
General

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ

28 Oct 2026

ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್