Billava Warriors – Billava News Portal
Wednesday, 28 October 2026
General News

ಕೋಟ್ಯಂತರ ಭಕ್ತರ ನಂಬಿಕೆಯ ಗುಳಿಗ ದೈವಕ್ಕೆ ಗೃಹಸಚಿವರಿಂದ ಅಪಮಾನ ಖಂಡನೀಯ - ವಕೀಲರು . ಪದ್ಮರಾಜ್‌ ಆರ್

27 Nov 2023
ಕೋಟ್ಯಂತರ ಭಕ್ತರ ನಂಬಿಕೆಯ ಗುಳಿಗ ದೈವಕ್ಕೆ ಗೃಹಸಚಿವರಿಂದ ಅಪಮಾನ ಖಂಡನೀಯ - ವಕೀಲರು . ಪದ್ಮರಾಜ್‌ ಆರ್

ಕೋಟ್ಯಂತರ ಭಕ್ತರ ನಂಬಿಕೆಯ ಗುಳಿಗ ದೈವಕ್ಕೆ ಗೃಹಸಚಿವರಿಂದ ಅಪಮಾನ ಖಂಡನೀಯ

ತುಳುನಾಡು ಮಾತ್ರವಲ್ಲ ದೇಶ, ವಿದೇಶದಲ್ಲೂ ಚರಿತ್ರೆ ಸೃಷ್ಟಿಸಿರುವ ನಾಟಕ ವಿಜಯಕುಮಾರ್ ಕೊಡಿಯಾಲ್‌ಬೈಲ್‌ ನಿರ್ದೇಶನದ'ಶಿವಧೂತ ಗುಳಿಗೆ'. ದೈವಾರಾಧನೆ ಎಂದರೆ ತುಳುನಾಡಿನ  ಧಾರ್ಮಿಕತೆ ಮತ್ತು ನಂಬಿಕೆ. ಇದು ಕೇವಲ ಆಚರಣೆಯಲ್ಲ; ತುಳುನಾಡಿನಬದುಕಿನ ಸಂಸ್ಕೃತಿಯೂ ಹೌದು ಎನ್ನುವುದನ್ನು ಅದ್ಭುತ ರಂಗಪ್ರಯೋಗದ ಮೂಲಕ ತೋರಿಸಿಕೊಟ್ಟರುಕೊಡಿಯಾಲ್‌ಬೈಲ್‌ರವರು. ಇದೀಗ ಇವರ ನಿರ್ದೇಶನದ  'ಶಿವಧೂತ ಗುಳಿಗೆ' ನಾಟಕದ ಬಗ್ಗೆ ರಾಜ್ಯದ ಗೃಹ ಸಚಿವ ಆರಗಜ್ಞಾನೇಂದ್ರ ಅವಹೇಳನ ಮಾಡಿರುವುದು ದೈವಾರಾದನೆ ಮಾತ್ರವಲ್ಲ ಕೋಟ್ಯಂತರ ಮಂದಿ ದೈವ ಭಕ್ತರಿಗೆ ಮಾಡಿದ ಅಪಮಾನ.

ತೀರ್ಥಹಳ್ಳಿಯಲ್ಲಿ ನಡೆದ ಶಿವಧೂತ ಗುಳಿಗೆ ನಾಟಕವನ್ನು ಸುಮಾರು 16 ಸಾವಿರ ಪ್ರೇಕ್ಷಕರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅದೇ ಊರಲ್ಲಿ ಗೃಹಸಚಿವರು ಗುಳಿಗನ್ನು ಜಪಾನ್ ಮಾತ್ರೆಗೆ ಹೋಲಿಕೆ ಮಾಡಿರುವುದು ಎಷ್ಟು ಸರಿ? ಕೂಡಲೇ ಗೃಹಸಚಿವರುತುಳುನಾಡು ಸೇರಿದಂತೆ ದೈವ ಭಕ್ತರಲ್ಲಿ ಕ್ಷಮೆಯಾಚನೆ ಮಾಡಬೇಕು. ತುಳುನಾಡಿನ ದೈವಾರಾಧನೆ ಬಗ್ಗೆ ಇವರಿಗೇನು ಗೊತ್ತಿದೆ?. . ರಾಜ್ಯದ ಗೃಹ ಸಚಿವರಾಗಿ ದೈವಾರಾಧನೆ ಬಗ್ಗೆ ಪರಿಜ್ಞಾನ ಇಲ್ಲದೆ; ವಿವೇಚನೆ ರಹಿತವಾಗಿ ಮಾತನಾಡುವುದನ್ನು ಬಿಟ್ಟು, ಆ ಬಗ್ಗೆ ಜ್ಞಾನ‌ಇರುವವರಲ್ಲಿ ಮಾಹಿತಿ ಪಡೆದು ಮಾತನಾಡಲಿ. ಅದನ್ನು ಬಿಟ್ಟು ಇಂತಹ ಅರೆಜ್ಞಾನದ ಮಾತುಗಳಿಗೆ ತುಳುನಾಡಿನ‌ ಜನ ಎಂದಿಗೂಕ್ಷಮೆ ನೀಡಲಾರರು...

- ಪದ್ಮರಾಜ್‌ ಆರ್. ನೋಟರಿ ಮತ್ತು ವಕೀಲರು ಮಂಗಳೂರು

ಕೋಶಾಧಿಕಾರಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

Related news

General

Test

28 Oct 2026

test

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್