Billava Warriors – Billava News Portal
Friday, 30 October 2026
Advertiser
Advertisement · 728×90 px
General News

"ಗರೋಡಿ ಜಾತ್ರೆ" ಯಲ್ಲಿ ಬಿಲ್ಲವ ಬ್ರಿಗೇಡ್ (ರಿ) ಕೇಂದ್ರೀಯ ಮಂಡಳಿ ವತಿಯಿಂದ ಸ್ಟಿಕ್ಕರ್ ಅಭಿಯಾನ

27 Nov 2023
"ಗರೋಡಿ ಜಾತ್ರೆ" ಯಲ್ಲಿ ಬಿಲ್ಲವ ಬ್ರಿಗೇಡ್ (ರಿ) ಕೇಂದ್ರೀಯ ಮಂಡಳಿ ವತಿಯಿಂದ ಸ್ಟಿಕ್ಕರ್ ಅಭಿಯಾನ
Advertiser
Advertisement · 728×90 px

ಬಿಲ್ಲವ ಬ್ರಿಗೇಡ್ (ರಿ) ಕೇಂದ್ರೀಯ ಮಂಡಳಿ , ಮಂಗಳೂರು ವಿಮಾನ ನಿಲ್ದಾಣಕ್ಕೆ ನಮ್ಮ ನಾಡಿನ ಪ್ರಸಿದ್ಧ ಇತಿಹಾಸ ಪುರುಷರಾದ ಕೋಟಿ- ಚೆನ್ನಯ್ಯ ರ ಹೆಸರನ್ನು ಇಡಬೇಕೆಂದು ಆಗ್ರಹಿಸಿ ಈಗಾಗಲೇ ನಾವು ಸ್ಟಿಕ್ಕರ್ ಅಭಿಯಾನ ಆರಂಭಿಸಿರುತ್ತೇವೆ.

ಇದರ ಅಂಗವಾಗಿ ನಿನ್ನೆ ಮಂಗಳವಾರದಂದು ಶ್ರೀ ಬ್ರಹ್ಮ ಬೈದರ್ಕಳ ಗರೋಡಿ ಕಂಕನಾಡಿಯ "ಗರೋಡಿ ಜಾತ್ರೆ" ಯ ಶುಭ ಸಂಧರ್ಭದಲ್ಲಿ ನಮ್ಮ ಅಭಿಯಾನದ ಬಗೆಗಿನ "ಸ್ಟಿಕ್ಕರ್ ಹಾಗೂ ಭಿತ್ತಿಪತ್ರಗಳ ವಿತರಣೆ" ಗಣ್ಯರ ಸಮ್ಮುಖದಲ್ಲಿ ನೆರವೇರಿತು. ಈ ಅಭಿಯಾನದಲ್ಲಿ ಗಣ್ಯರು, ಸಮಸ್ತ ಭಕ್ತಾದಿಗಳು ಮೊಬೈಲ್ ಕವರ್‌ಗೆ ಸ್ಟಿಕ್ಕರನ್ನು ಅಳವಡಿಸಿ ಅಭಿಯಾನಕ್ಕೆ ಬೆಂಬಲಿಸಿ ಶುಭ ಹಾರೈಸಿದರು. ಅದೇ ರೀತಿ ಆಗಮಿಸಿದ ಸಮಸ್ತರಿಗೆ ಮನೆಗೆ ಹಾಗೂ ವಾಹನಗಳಿಗೆ ಅಳವಡಿಸುವಂತಹ ಅಭಿಯಾನದ ಸ್ಟಿಕ್ಕರನ್ನು ನೀಡಿ ಬೆಂಬಲಿಸುವಂತೆ ವಿನಂತಿಸಲಾಯಿತು.

ಮುಂದಿನ ಹಂತವಾಗಿ ಈ ತುಳುನಾಡಿನಾದ್ಯಂತ ಅಭಿಯಾನವನ್ನು ಮುಂದುವರಿಸಲಿದ್ದು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಅಂತೆಯೇ ಮನೆ ಮನೆಗಳಲ್ಲಿ ತೆರಳಿ, ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ್ಯ ರ ಹೆಸರಿಡುವ ಬಗೆಗಿನ ಜಾಗೃತಿ ಮೂಡಿಸುವ ಸಲುವಾಗಿ ಸ್ಟಿಕ್ಕರ್ ಅಭಿಯಾನ ನಡೆಯಲಿದೆ.

Related news

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ
General

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ

28 Oct 2026

ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್