Billava Warriors – Billava News Portal
Wednesday, 28 October 2026
General News

'ದ.ಕ. ಜಿಲ್ಲೆಯಲ್ಲಿ ನಾಳೆಯಿಂದ ಎಲ್ಲಾ ಅಂಗಡಿಗಳು ತೆರೆಯಲು ಅವಕಾಶ' - ಕೋಟ ಶ್ರೀನಿವಾಸ್ ಪೂಜಾರಿ

27 Nov 2023
'ದ.ಕ. ಜಿಲ್ಲೆಯಲ್ಲಿ ನಾಳೆಯಿಂದ ಎಲ್ಲಾ ಅಂಗಡಿಗಳು ತೆರೆಯಲು ಅವಕಾಶ' - ಕೋಟ ಶ್ರೀನಿವಾಸ್ ಪೂಜಾರಿ

ಮಂಗಳೂರು: "ದ.ಕ. ಜಿಲ್ಲೆಯಲ್ಲಿ ಜೂನ್.23ರಿಂದ ಎಲ್ಲಾ ಅಂಗಡಿಗಳು ತೆರೆಯಲು ಅವಕಾಶ ನೀಡಲಾಗಿದೆ" ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಅವರು, "ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಎಲ್ಲಾ ಶಾಸಕರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ನಾಳೆಯಿಂದ ಎಲ್ಲಾ ಅಂಗಡಿಗಳನ್ನು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ತನಕ ತೆರೆಯಲು ಅವಕಾಶ ನೀಡಲಾಗಿದೆ" ಎಂದರು.

ಇನ್ನು "ಜಿಲ್ಲೆಯಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಪ್ರಕರಣಗಳು ತಗ್ಗಿಸಲು ಕ್ರಮ ವಹಿಸಬೇಕೆಂದೂ ಮುಖ್ಯಮಂತ್ರಿ ಸೂಚನೆ ನೀಡಿದ್ದು, ಕೊರೊನಾ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ವ್ಯವಹಾರ ನಿರ್ವಹಿಸಬೇಕು" ಎಂದು ಸಚಿವರು ತಿಳಿಸಿದ್ದಾರೆ.

Related news

General

Test

28 Oct 2026

test

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್