Billava Warriors – Billava News Portal
Thursday, 29 October 2026
Advertiser
Advertisement · 728×90 px
General News

ಬ್ರಹ್ಮಶ್ರೀ ನಾರಾಯಣಗುರುಗಳ ಬಗ್ಗೆ ಯಾಕೆ ಸರ್ಕಾರಕ್ಕೆ ತಾತ್ಸಾರ ಭಾವನೆ? ಪದ್ಮರಾಜ್ ಆರ್.

27 Nov 2023
ಬ್ರಹ್ಮಶ್ರೀ ನಾರಾಯಣಗುರುಗಳ ಬಗ್ಗೆ ಯಾಕೆ ಸರ್ಕಾರಕ್ಕೆ ತಾತ್ಸಾರ ಭಾವನೆ? ಪದ್ಮರಾಜ್ ಆರ್.
Advertiser
Advertisement · 728×90 px

ಬಸವಣ್ಣ, ಡಾ.ಬಿ.ಆರ್.ಅಂಬೇಡ್ಕರ್, ಕುವೆಂಪು ಸೇರಿದಂತೆ ನಾಡಿನ ವಿವಿಧ ಸಮಾಜ ಸುಧಾರಕರ ಕುರಿತು ಪಠ್ಯ ಪರಿಷ್ಕರಣೆಯಲ್ಲಿಆಗಿರುವ ತಪ್ಪುಗಳಿಗೆ ಸಮಾಜದ ವಿವಿಧ ವಲಯಗಳಿಂದ ಕೇಳಿಬಂದ ವಿರೋಧಗಳಿಗೆ ಸ್ಪಂದಿಸಿರುವ ಶಿಕ್ಷಣ ಇಲಾಖೆ ಎಂಟುತಿದ್ದುಪಡಿ ಮಾಡಿ ಪಠ್ಯದಲ್ಲಿ ಅಳವಡಿಸುವಂತೆ ಆದೇಶ ಹೊರಡಿಸಿದೆ.  ಇದನ್ನು ನಾವು ಸ್ವಾಗತಿಸುತ್ತೇವೆ. ಆದರೆ ಬ್ರಹ್ಮಶ್ರಿನಾರಾಯಣಗುರುಗಳ ಪಠ್ಯವನ್ನು10ನೇ ತರಗತಿಯ ಪಠ್ಯದಲ್ಲಿ ಮರುಸೇರ್ಪಡೆಗೊಳಿಸಿ ಎನ್ನುವ ಬಿಲ್ಲವ ಸಮುದಾಯ ಹಾಗುಗುರುಗಳ ಅನುಯಾಯಿಗಳ ಬೇಡಿಕೆಗೆ ಸ್ಪಂದಿಸಿಲ್ಲ. ಸರ್ಕಾರದಲ್ಲಿ ಸಮುದಾಯಕ್ಕೆ ಸೇರಿದ ಇಬ್ಬರು ಸಚಿವರು ಇದ್ದರೂ ಈ ಬಗ್ಗೆಚಕಾರ ಎತ್ತಿಲ್ಲ. ಕರ್ನಾಟಕದಲ್ಲಿ ಬಿಲ್ಲವ, ಆರ್ಯ ಈಡಿಗ ಸೇರಿದಂತೆ 26 ಪಂಗಡಗಳ ಹಾಗು ಬ್ರಹ್ಮಶ್ರೀ ನಾರಾಯಣಗುರುಗಳಕೋಟ್ಯಂತರ ಮಂದಿ ಅನುಯಾಯಿಗಳ ಬಗ್ಗೆ ಸರ್ಕಾರಕ್ಕೆ ಯಾಕೆ ತಾತ್ಸಾರ ಭಾವನೆ?

ನಾರಾಯಣಗುರುಗಳ ಕುರಿತ ಪಠ್ಯವನ್ನು 10ನೇ ತರಗತಿಯ ಕನ್ನಡ ಭಾಷಾ ಪಠ್ಯದಲ್ಲಿ ಸೇರಿಸಲಾಗಿದೆ ಎಂದು ಸರ್ಕಾರ ಹಾಗು ಪಕ್ಷದಮುಖಂಡರು ಸಮಜಾಯಿಷಿ ನೀಡುತ್ತಿದ್ದಾರೆ. ಆದರೆ ಕನ್ನಡ ಭಾಷಾ ಪಠ್ಯವನ್ನು ಶೇ.30ರಿಂದ 50ರಷ್ಟು ವಿದ್ಯಾರ್ಥಿಗಳು ಮಾತ್ರಓದುತ್ತಾರೆ. ಉಳಿದ ಭಾಷಾ ಮಾಧ್ಯಮದಲ್ಲಿ ಓದುವ ವಿದ್ಯಾರ್ಥಿಗಳು ಗುರುಗಳ ಕುರಿತ ಮಾಹಿತಿಯನ್ನು ಎಲ್ಲಿ ಪಡೆಯಬೇಕುಎಂಬುದರ ಬಗ್ಗೆ ಸರ್ಕಾರ ಚಿಂತಿಸಿದೆಯೆ? ಯಾಕೆ ಸ್ವಾಮಿ ಬಿಲ್ಲವ, ಈಡಿಗ ಹಾಗು ಸಮಸ್ತ ನಾರಾಯಣಗುರುಗಳಅನುಯಾಯಿಗಳನ್ನು ಮತ್ತೆ ಮತ್ತೆ ಕಡೆಗಣಿಸುತ್ತಿದ್ದೀರಿ?

ವಿರೋಧ ಪಕ್ಷದ ಶಾಸಕರು, ಮುಖಂಡರು ಕೇವಲ ಪತ್ರಿಕಾ ಹೇಳಿಕೆ ನೀಡಿ ಸರ್ಕಾರದಿಂದ ಗುರುಗಳ ಅನುಯಾಯಿಗಳಿಗೆ ‌ಆಗುತ್ತಿರುವಅನ್ಯಾಯದ ಬಗ್ಗೆ ಸುಮ್ಮನೆ ಕುಳಿತಿದ್ದಾರೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಪಠ್ಯವನ್ನು ಮತ್ತೆ 10ನೇ ತರಗತಿಯ ಸಮಾಜ ವಿಜ್ಞಾನಅಥವಾ ಎಲ್ಲ ಭಾಷಾ ಮಾಧ್ಯಮಕ್ಕೆ ಸೇರ್ಪಡೆಗೊಳಿಸುವ ಮೂಲಕ ಎಲ್ಲ ವಿದ್ಯಾರ್ಥಿಗಳು ಓದುವಂತೆ ಮಾಡುವ ನಿರ್ಧಾರಕೈಗೊಳ್ಳಲಿ. ಇಲ್ಲವಾದಲ್ಲಿ ತೀವ್ರ ಹೋರಾಟಕ್ಕೂ ಸಿದ್ಧರಿದ್ದೇವೆ ಎಂದು ಸರ್ಕಾರಕ್ಕೆ ಎಚ್ಚರಿಸುತ್ತಿದ್ದೇವೆ.

ಪದ್ಮರಾಜ್ ಆರ್.

ಕೋಶಾಧಿಕಾರಿ, ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ

Related news

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ
General

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ

28 Oct 2026

ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್