Billava Warriors – Billava News Portal
Wednesday, 28 October 2026
General News

“ಬ್ರಹ್ಮಶ್ರೀ ನಾರಾಯಣ ಗುರು ವೃತ್ತ” ನಾಮಕರಣ

27 Nov 2023
“ಬ್ರಹ್ಮಶ್ರೀ ನಾರಾಯಣ ಗುರು ವೃತ್ತ” ನಾಮಕರಣ

ವೃತ್ತಕ್ಕೆ ನಾರಾಯಣಗುರುಗಳ ಹೆಸರಿಡುವ ಮೂಲಕ ಅವರ ಆದರ್ಶವನ್ನು ಪಾಲಿಸಬೇಕು ಎನ್ನುವ ಸಂದೇಶವನ್ನು ಪರೋಕ್ಷವಾಗಿ ನೀಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಹೇಳಿದರು ಅವರು ಗುರುವಾರ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಲೇಡಿಹಿಲ್ ಶಾಲೆ ಬಳಿಯ ವೃತ್ತಕ್ಕೆ “ಬ್ರಹ್ಮಶ್ರೀ ನಾರಾಯಣ ಗುರು ವೃತ್ತ” ನಾಮಕರಣ ಸಮಾರಂಭದಲ್ಲಿ ಮಾತನಾಡಿದರು.

ಮಂಗಳೂರಿನಲ್ಲಿ ನಾರಾಯಣ ಗುರುಗಳಿಂದ ಕುದ್ರೋಳಿ ದೇವಾಲಯ ಸ್ಥಾಪಿಸಲ್ಪಟ್ಟಿತ್ತು ಆವಾಗಿನಿಂದಲೇ ಮಂಗಳೂರು ಹಾಗೂ ನಾರಾಯಣಗುರುಗಳ ನಡುವೆ ನಂಟಿದೆ. ನಾರಾಯಣಗುರುಗಳು ಪ್ರಾಥಃಸ್ಮರಣೀಯರು, ತಳಮಟ್ಟದಲ್ಲಿದ್ದ ಸಮುದಾಯವನ್ನು ಮೇಲುಸ್ತರಕ್ಕೆ ತರಲು ಸೌಹಾರ್ದತೆಯನ್ನು ಸಾರಿ ಅಸ್ಪ್ರಸ್ತೆಯನ್ನು ನಿವಾರಣೆ ಮಾಡಲು ಮುನ್ನಡಿ ಇಟ್ಟಿರುವುದನ್ನು ನಾವು ಅರಿತಿದ್ದೇವೆ, ಇಂತಹ ಆದರ್ಶಗಳು ಪೀಳಿಗೆಗಿಂದ ಪೀಳಿಗೆಗೆ ಸಾಗಲು ಈ ರೀತಿಯಾಗಿ ಸ್ಮರಣೀಯವಾಗಿ ಉಳಿಯಲು ವೃತ್ತಗಳಿಗೆ, ಸ್ಮಾರಕಗಳಿಗೆ ನಾಮಕರಣ ಮಾಡುವುದು ಪೂರಕ ಎಂದರು

 

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಹೃದಯದಲ್ಲಿ ನಾರಾಯಣ ಗುರುಗಳ ಬಗ್ಗೆ ಅಭಿಮಾನ ಇದ್ದಿದ್ದರೆ ಯಾರೂ ರಾಜಕೀಯ ಮಾಡುತ್ತಿರಲಿಲ್ಲ, ಅವರು ಅಧಿಕಾರದಲ್ಲಿದ್ದಾಗ ಈ ಕಾರ್ಯ ಮಾಡಬಹುದಿತ್ತು, ಅದೂ ಆಗಲಿಲ್ಲ, ಈಗ ನಾವು ಮಾಡಿದ್ರು ಕಾರ್ಯಕ್ರಮದ ಹಿಂದಿನಿಂದ ತೊಂದರೆ ಕೊಡುವ ಕೆಲಸ ನಡೆದಿದೆ ಎಂದು ಕಾಂಗ್ರೆಸ್ ವಿರುದ್ಧ ಪರೋಕ್ಷವಾಗಿ ಕುಟುಕಿದರು
ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.ಸಂಸದ ನಳೀನ್ ಕುಮಾರ್ ಕಟೀಲ್, ಶಾಸಕರಾದ ಡಿ.ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ ವೈ., ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮೊದಲಾದವರು ಉಪಸ್ಥಿತರಿದ್ದರು.

Related news

General

Test

28 Oct 2026

test

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್