Billava Warriors – Billava News Portal
Friday, 30 October 2026
Advertiser
Advertisement · 728×90 px
General News

ಮಂಗಳೂರು ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕೈಕೊಟ್ಟ ವಿದ್ಯುತ್‌: ವಿಮಾನಗಳ ಹಾರಾಟ ಸ್ಥಗಿತ

27 Nov 2023
ಮಂಗಳೂರು ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕೈಕೊಟ್ಟ ವಿದ್ಯುತ್‌: ವಿಮಾನಗಳ ಹಾರಾಟ ಸ್ಥಗಿತ
Advertiser
Advertisement · 728×90 px

ತಾಂತ್ರಿಕ ಕಾರಣದಿಂದಾಗಿ ಮಂಗಳೂರು ವಿಮಾನ ನಿಲ್ದಾಣದ ರನ್ ವೇನಲ್ಲಿ ವಿದ್ಯುತ್ ಕೈ ಕೊಟ್ಟಿದ್ದು, ಏರ್ಪೋರ್ಟ್ ನಲ್ಲಿ ಲ್ಯಾಂಡ್ಆಗಬೇಕಿದ್ದ ವಿಮಾನಗಳನ್ನು ಡೈವರ್ಟ್ ಮಾಡಲಾಗಿದೆ.

ಮಂಗಳೂರು: ತಾಂತ್ರಿಕ ಕಾರಣದಿಂದಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ( Mangaluru International Airport) ದ ರನ್ ವೇನಲ್ಲಿ ವಿದ್ಯುತ್ ಕೈ ಕೊಟ್ಟಿದ್ದು, ಏರ್ಪೋರ್ಟ್ ನಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನಗಳನ್ನು ಡೈವರ್ಟ್ಮಾಡಲಾಗಿದೆ. ಪವರ್ ಸಪ್ಲೇ ಸಮಸ್ಯೆಯಿಂದ ರನ್ ವೇನಲ್ಲಿ ಕತ್ತಲು ಆವರಿಸಿದೆ. ಮುಂಬೈನಿಂದ ಆಗಮಿಸಿದ ವಿಮಾನ ಎಟಿಸಿಸೂಚನೆ ಹಿನ್ನೆಲೆ ಲ್ಯಾಂಡ್ ಆಗದೇ ಕೇರಳದ ಕಣ್ಣೂರಿಗೆ ವಾಪಾಸ್ ತೆರಳಿದೆ. ತಾಂತ್ರಿಕ ಸಮಸ್ಯೆ ಸರಿಪಡಿಸುವವರೆಗೆ ಮಂಗಳೂರಿಗೆಬರುವ ಮತ್ತು ಹೋಗುವ ಎಲ್ಲಾ ವಿಮಾನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ವಿದ್ಯುತ್‌ ಪೂರೈಕೆ ಸಮಸ್ಯೆಯನ್ನು ಏರ್‌ಪೋರ್ಟ್ ಸಿಬ್ಬಂದಿಗಳು ಸರಿಪಡಿಸುತ್ತಿದ್ದು, ಬಹರೈನ್‌ಗೆ ತೆರಳಬೇಕಿದ್ದ ಏರ್‌ ಇಂಡಿಯಾಸಂಚಾರದಲ್ಲಿ ವಿಳಂಬವಾಗಿದೆ. ಜೊತೆಗೆ ಚೆನ್ನೈ, ಬೆಂಗಳೂರಿಂದ ಬರಬೇಕಿದ್ದ ವಿಮಾನಗಳ ಲ್ಯಾಂಡಿಂಗ್ ಕೂಡ ವಿಳಂಬವಾಗುತ್ತಿದೆ.

ವಿಮಾನಕ್ಕೆ ಹಕ್ಕಿ ಡಿಕ್ಕಿ: ತಪ್ಪಿದ ಭಾರೀ ದುರಂತ 

ಇತ್ತೀಚೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೇಕಾಫ್ ಗೆ ಸಿದ್ಧವಾಗಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿಯೊಂದುಡಿಕ್ಕಿ ಹೊಡೆದಿತ್ತು. ಅದೃಷ್ಟವಶಾತ್ ಭಾರೀ ದುರಂತ ತಪ್ಪಿತ್ತು. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಸಹಿತ ಬೆಳಗ್ಗೆ 8.30ಕ್ಕೆ ಮಂಗಳೂರಿನಿಂದ ದುಬೈಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿತ್ತು

ಟ್ಯಾಕ್ಸಿ ವೇ ದಾಟಿ ರನ್ ವೇನಲ್ಲಿ ಇಂಡಿಗೋ ವಿಮಾನ ಸಾಗುತ್ತಿತ್ತು. ಈ ವೇಳೆ ಏಕಾಏಕಿಯಾಗಿ ವಿಮಾನದ ರೆಕ್ಕೆಯ ಭಾಗಕ್ಕೆ ಹಕ್ಕಿ ಡಿಕ್ಕಿಹೊಡೆದಿತ್ತು. ತಕ್ಷಣ ಅಪಾಯದ ಸೂಚನೆ ಅರಿತು ಪೈಲಟ್ ಎಟಿಸಿಗೆ ಮಾಹಿತಿ ನೀಡಿದ್ದರು. ಟೇಕಾಫ್ ಕ್ಯಾನ್ಸಲ್ ಮಾಡಿ ರನ್ವೇನಿಂದ ವಿಮಾನವನ್ನು ವಾಪಾಸ್ ತರಲಾಗಿತ್ತು.

ಬಲಿಕ ಪ್ರಯಾಣಿಕರನ್ನ ಇಳಿಸಿ ವಿಮಾನದ ತಪಾಸಣೆ ಮಾಡಲಾಗಿತ್ತು. ಬೆಂಗಳೂರಿನಿಂದ ಆಗಮಿಸಿದ ಮತ್ತೊಂದು ವಿಮಾನದಮೂಲಕ ಪ್ರಯಾಣಿಕರನ್ನು ದುಬೈಗೆ ಕಳಿಸಲು ವ್ಯವಸ್ಥೆ ಮಾಡಲಾಯಿತು. ಕೆಲ ಕಾಲ ಮಂಗಳೂರು ಏರ್ಪೋರ್ಟ್ ನಲ್ಲಿ ಈ ಅವಘಡಆತಂಕಕ್ಕೆ ಕಾರಣವಾಗಿತ್ತು.

Related news

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ
General

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ

28 Oct 2026

ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್