Billava Warriors – Billava News Portal
Thursday, 29 October 2026
Advertiser
Advertisement · 728×90 px
General News

ಮಂಗಳೂರು ಏರ್‌ಪೋರ್ಟ್‌ಗೆ ಕೋಟಿ-ಚೆನ್ನಯ ಹೆಸರಿಡುವಂತೆ ಒತ್ತಾಯಿಸಿ ಬಿಲ್ಲವ ಬ್ರಿಗೇಡ್‌ನಿಂದ ಸ್ಟಿಕ್ಕರ್‌ ಅಭಿಯಾನ

27 Nov 2023
ಮಂಗಳೂರು ಏರ್‌ಪೋರ್ಟ್‌ಗೆ ಕೋಟಿ-ಚೆನ್ನಯ ಹೆಸರಿಡುವಂತೆ ಒತ್ತಾಯಿಸಿ ಬಿಲ್ಲವ ಬ್ರಿಗೇಡ್‌ನಿಂದ ಸ್ಟಿಕ್ಕರ್‌ ಅಭಿಯಾನ
Advertiser
Advertisement · 728×90 px

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯ ಎಂದು ಮರುನಾಮಕರಣ ಮಾಡುವಂತೆ ಒತ್ತಾಯಿಸಿ ಬಿಲ್ಲವ ಬ್ರಿಗೇಡ್‌‌ 8 ಕ್ಷೇತ್ರಗಳಲ್ಲಿ ಒಂದು ತಿಂಗಳ ಕಾಲ ಸ್ಟಿಕ್ಕರ್ ಅಭಿಯಾನ ನಡೆಸಲಿದೆ.

ಮಂಗಳೂರು ಪ್ರೆಸ್‌ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಲ್ಲವ ಬ್ರಿಗೇಡ್ ಸಂಸ್ಥಾಪಕ ಅಧ್ಯಕ್ಷ ಅವಿನಾಶ್ ಸುವರ್ಣ, "ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ಮಾಡಬೇಕೆಂದು ಒತ್ತಾಯಿಸಿ 2020ರ ಡಿ.7ರಂದು ಕುದ್ರೋಳಿ ಗೋಕರ್ಣನಾಥೇಶ್ವರ ಕ್ಷೇತ್ರದಿಂದ ಮಂಗಳೂರು ಅಂತರಾಷ್ಟ್ರೀಯ ನಿಲ್ದಾಣದವರೆಗೆ ಬೃಹತ್‌‌‌‌ ಬೈಕ್‌ ಜಾಥಾವನ್ನು ಹಮ್ಮಿಕೊಂಡಿತ್ತು. ಇದು ನಡೆದ ಮರುದಿನ ಕರ್ನಾಟಕ ವಿಧಾನಸಭೆಯಲ್ಲಿ ಮೂಡುಬಿದಿರೆಯ ಶಾಸಕ ಉಮಾನಾಥ್‌ ಕೋಟ್ಯಾನ್‌ ಅವರು ಈ ಬಗ್ಗೆ ಪ್ರಸ್ತಾಪಿಸಿದ್ದರು" ಎಂದು ತಿಳಿಸಿದ್ದಾರೆ.

"ಒಂದು ವರ್ಷ ಕಳೆದರೂ ಸರ್ಕಾರದಿಂದ ಈ ಬಗ್ಗೆ ಯಾವುದೇ ಅಧಿಕೃತ ಉತ್ತರ ಬಂದಿಲ್ಲ. ಕರ್ನಾಟಕ ರಾಜ್ಯ ಸರ್ಕಾರ ಮುಂದಿನ ತಿಂಗಳಿನಲ್ಲಿ ಸಚಿವ ಸಂಪುಟ ಸಭೆಯಲ್ಲಿ ಈ ಮರುನಾಮಕರಣ ಪ್ರಸ್ತಾಪನೆಯನ್ನು ಅಂಗೀಕರಿಸಿ ತಕ್ಷಣ ಕೇಂದ್ರ ಸರ್ಕಾರಕ್ಕೆ ಕಳುಹಿಸಿ ಕೊಡುವಂತೆ ಒತ್ತಾಯಿಸುತ್ತಿದ್ದೇವೆ" ಎಂದಿದ್ದಾರೆ.

"ಮುಂದಿನ ಒಂದು ತಿಂಗಳ ಕಾಲ ದ.ಕ. ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರದಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಲು ಸ್ಟಿಕ್ಕರ್‌‌ ಅಭಿಯಾನ ನಡೆಸಲಾಗುವುದು. ಈ ಅಭಿಯಾನ ಮುಗಿದ ಬಳಿಕ ಇದೇ ಬೇಡಿಕೆಯನ್ನು ಮುಂದಿಟ್ಟು ಬೃಹತ್‌‌ ಜನ ಸಮಾವೇಶ ನಡೆಸಲಾಗುವುದು" ಎಂದು ಹೇಳಿದ್ದಾರೆ.

ಈ ಸಂದರ್ಭ, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಸಾಲ್ಯಾನ್, ಕಿಶನ್ ಅಮೀನ್, ಪ್ರಶಾಂತ್, ಪವನ್ ಸಾಲ್ಯಾನ್ ಉಪಸ್ಥಿತರಿದ್ದರು.

Related news

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ
General

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ

28 Oct 2026

ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್