Billava Warriors – Billava News Portal
Wednesday, 28 October 2026
General News

ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟಗೊಂಡ ಪುರುಷೋತ್ತಮ್ ಪೂಜಾರಿ ಮನೆ ಹಸ್ತಾಂತರಿಸಿದ ಗುರುಬೆಳದಿಂಗಳು ಟ್ರಸ್ಟ್

27 Nov 2023
ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟಗೊಂಡ ಪುರುಷೋತ್ತಮ್  ಪೂಜಾರಿ ಮನೆ ಹಸ್ತಾಂತರಿಸಿದ ಗುರುಬೆಳದಿಂಗಳು ಟ್ರಸ್ಟ್

ಮಂಗಳೂರು, ಮಾ 21 ನಗರದ ಕಂಕನಾಡಿ ಗರೋಡಿಯ ಬಳಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಂಭೀರವಾಗಿಗಾಯಗೊಂಡು, ಗುಣಮುಖರಾದ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ಕೊಟ್ಟ ಮಾತಿನಂತೆ ಇಂದು(ಮಾ.22) ಗುರುಬೆಳದಿಂಗಳು ಫೌಂಡೇಶನ್ 6 ಲಕ್ಷ ರೂಪಾಯಿ ವೆಚ್ಚದಲ್ಲಿ ನವೀಕರಿಸಿದ ಮನೆಯನ್ನು ಹಸ್ತಾಂತರಿಸಿದೆ.19ನವೆಂಬರ್ 2022 ರಂದು ಮಂಗಳೂರು ನಗರದ ಗರೋಡಿ ಸಮೀಪದ ರಸ್ತೆಯಲ್ಲಿ ಹೋಗುತ್ತಿದ್ದಾಗ ಆಟೋದಲ್ಲಿ ಕುಕ್ಕರ್ಬಾಂಬ್ ಸ್ಫೋಟವಾಗಿತ್ತು. ಘಟನೆಯಲ್ಲಿ ಗಾಯಗೊಂಡು ಪುರುಷೋತ್ತಮ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೇ ವೇಳೆ ಅವರಪುತ್ರಿಯ ಮದುವೆ ನಿಶ್ಚಯವಾಗಿದ್ದರಿಂದ, ಪುರುಷೋತ್ತಮ್ ಮನೆಯ ದುರಸ್ತಿ ಕಾರ್ಯವನ್ನ ಮಾಡಬೇಕೆಂದು ನಿಶ್ಚಯಿಸಿದ್ದರು. ಆದರೆ ಈ ದುರ್ಘಟನೆ ಬಳಿಕ ಮನೆ ದುರಸ್ತಿಯಾಗದೆ ಕಂಗೆಟ್ಟಿದ್ದರು. ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷ, ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ತಂಡದೊಂದಿಗೆ ಭೇಟಿಯಾದಾಗ ಪುರುಷೋತ್ತಮ್ ತಮ್ಮ ನೋವನ್ನುತೋಡಿಕೊಂಡಿದ್ದರು. ಈ ವೇಳೆ ಗುರು ಬೆಳದಿಂಗಲು ಫೌಂಡೇಶನ್ ಅವರು ಮನೆ ನವೀಕರಿಸುವ ಭರವಸೆ ನೀಡಿದ್ದರು.

ಅದರಂತೆ ಇಂದು ಗುರು ಬೆಳದಿಂಗಲು ಫೌಂಡೇಶನ್ ಕೊಟ್ಟ ಮಾತಿನಂತೆ ಮನೆ ನವೀಕರಣಗೊಳಿಸಿ ಯುಗಾದಿ ಹಬ್ಬದ ಗಿಪ್ಟ್ನೀಡಿದ್ದಾರೆ.

Related news

General

Test

28 Oct 2026

test

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್