Billava Warriors – Billava News Portal
Wednesday, 28 October 2026
General News

'ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯ ಹೆಸರಿಡಬೇಕು' - ವಿಧಾನಸಭೆಯಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್ ಆಗ್ರಹ

27 Nov 2023
'ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯ ಹೆಸರಿಡಬೇಕು' - ವಿಧಾನಸಭೆಯಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್ ಆಗ್ರಹ

"ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವೀರಪುರಷರಾದ ಕೋಟಿ-ಚೆನ್ನಯ ಹೆಸರಿಡಬೇಕು" ಎಂದು ಶಾಸಕ ಉಮಾನಾಥ್ ಎ.ಕೋಟ್ಯಾನ್ ವಿಧಾನಸಭೆಯಲ್ಲಿ ಆಗ್ರಹಿಸಿದ್ದಾರೆ.ಈ ಕುರಿತು ವಿಧಾನಸಭೆ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, "ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ವಹಣೆಯನ್ನು ಈಗ ಅದಾನಿ ಸಂಸ್ಥೆಗೆ ವಹಿಸಲಾಗಿದ್ದು, ಅದಾನಿ ಸಂಸ್ಥೆ ವಿಮಾನ ನಿಲ್ದಾಣಕ್ಕೆ ಅದಾನಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಂಬ ಹೆಸರಿಡಲಾಗಿದೆ. ಹೀಗಾಗಿ ಈ ವಿಚಾರಕ್ಕೆ ಕರಾವಳಿ ಭಾಗದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿ ಹೋರಾಟ, ಪ್ರತಿಭಟನೆಗಳು ನಡೆಯುತ್ತಿರುವುದರಿಂದ ಕೋಟಿ-ಚೆನ್ನಯ ಅವರ ಹೆಸರನ್ನು ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಡಬೇಕು ಎಂದು ಒತ್ತಾಯಿಸಿದ್ದಾರೆ.

ಇನ್ನು ಈ ಪ್ರಸ್ತಾಪಕ್ಕೆ ಗೃಹ ಹಾಗೂ ಕಾನೂನು ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿ, ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅದಾನಿ ಸಂಸ್ಥೆಗೆ ಕೇಂದ್ರ ಸರಕಾರ ಗುತ್ತಿಗೆ ನೀಡಿದ್ದು, ಈ ಕುರಿತು ಸಂಬಂಧಪಟ್ಟ ಸಚಿವರ ಗಮನಕ್ಕೆ ತಂದು ವಿಮಾನ ನಿಲ್ದಾಣದ ಹೆಸರು ಬದಲಿಸಲು ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ.

Related news

General

Test

28 Oct 2026

test

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್