Billava Warriors – Billava News Portal
Wednesday, 28 October 2026
General News

'ಮಂಗಳೂರು ವಿಮಾನ ನಿಲ್ದಾಣ ಇನ್ಮುಂದೆ ಕೋಟಿ ಚೆನ್ನಯ ಏರ್‌‌ಪೋರ್ಟ್' - ಬೋರ್ಡ್ ಹಾಕಿಸಿದ ಮಿಥುನ್‌ ರೈ

27 Nov 2023
'ಮಂಗಳೂರು ವಿಮಾನ ನಿಲ್ದಾಣ ಇನ್ಮುಂದೆ ಕೋಟಿ ಚೆನ್ನಯ ಏರ್‌‌ಪೋರ್ಟ್' - ಬೋರ್ಡ್ ಹಾಕಿಸಿದ ಮಿಥುನ್‌ ರೈ

ಬಜ್ಪೆಯ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು 50 ವರ್ಷಗಳ ಕಾಲ ಅದಾನಿ ಕಂಪನಿಗೆ ಹಸ್ತಾಂತರಗೊಳಿಸಿದ ಬಳಿಕ ವಿಮಾನ ನಿಲ್ದಾಣದ ನಾಮಫಲಕದಲ್ಲಿ ಅದಾನಿ ಏರ್‌‌ಪೋರ್ಟ್ ಎಂದು ಸೇರಿಸಲಾಗಿದೆ.

ಇದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್‌ನ ಜಿಲ್ಲಾ ಯುವ ಘಟಕದ ಅಧ್ಯಕ್ಷರಾದ ಮಿಥುನ್‌ ರೈ ಅವರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣವೆಂದು ಹೆಸರು ಇಡಲು ಒತ್ತಾಯ ಮಾಡುತ್ತಲ್ಲೇ ಇದ್ದಾರೆ.

ಈ ನಡುವೆ ಈಗ ಮಿಥುನ್‌ ರೈ ಅವರು ಕೋಟಿ ಚೆನ್ನಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂಬ ನಾಮಕರಣದ ಬೋರ್ಡ್ ಹಾಕಿಸಿದ್ದಾರೆ. ಹಾಗೆಯೇ, ''ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಇನ್ಮುಂದೆ ಕೋಟಿ ಚೆನ್ನಯ ಇಂಟರ್‌ ನ್ಯಾಷನಲ್‌ ಏರ್‌ಪೋರ್ಟ್ ಎಂದು ಕರೆಯಲಾಗುತ್ತದೆ'' ಎಂದು ಹೇಳಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ''ನೀವು ನಮ್ಮ ಮಾತನ್ನು ಕೇಳುವುದಿಲ್ಲವೇ? ತುಳುವರ ಭಾವನೆಗಳಿಗೆ ನೀವು ಗಮನ ನೀಡುವುದಿಲ್ಲವೇ? ನಮ್ಮ ನಗರದಲ್ಲಿ ಅದಾನಿ ಏರ್‌ಪೋರ್ಟ್ಸ್ ಬೋರ್ಡ್‌ಗಳನ್ನು ಹಾಕಲು ನಾವು ಒಪ್ಪುವುದಿಲ್ಲ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಇನ್ಮುಂದೆ ಕೋಟಿ ಚೆನ್ನಯ ಇಂಟರ್‌ ನ್ಯಾಷನಲ್‌ ಏರ್‌ಪೋರ್ಟ್ ಎಂದು ಕರೆಯಲಾಗುತ್ತದೆ'' ಎಂದು ಹೇಳಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣಕ್ಕೆ ಅದಾನಿ ಹೆಸರು ಇಟ್ಟಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ರೂಪದಲ್ಲಿ ಈ ಬೋರ್ಡ್ ಹಾಕಲಾಗಿದೆ. ವಿಮಾನ ನಿಲ್ದಾಣಕ್ಕೆ ತೆರಳುವ ಕೆಂಜಾರು ಸಮೀಪದಲ್ಲಿ ಸುಸ್ವಾಗತ ಕೋಟಿ-ಚೆನ್ನಯ ಅಂತರ್‌ ರಾಷ್ಟ್ರೀಯ ವಿಮಾನ ನಿಲ್ದಾಣ ಮಂಗಳೂರು ಎಂದು ಹಾಕಲಾಗಿದ್ದು ಕೆಳ ಭಾಗದಲ್ಲಿ ಮಿಥುನ್‌ ರೈ ಅವರ ಭಾವಚಿತ್ರವೂ ಇದೆ.

Related news

General

Test

28 Oct 2026

test

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್