Billava Warriors – Billava News Portal
Thursday, 29 October 2026
Advertiser
Advertisement · 728×90 px
General News

ಯುವವಾಹಿನಿ (ರಿ.) ಉಡುಪಿ ಘಟಕ : ಸನ್ಮಾನ ಮತ್ತು ಸಂವಾದ ಕಾರ್ಯಕ್ರಮ

27 Nov 2023
ಯುವವಾಹಿನಿ (ರಿ.) ಉಡುಪಿ ಘಟಕ : ಸನ್ಮಾನ ಮತ್ತು ಸಂವಾದ ಕಾರ್ಯಕ್ರಮ
Advertiser
Advertisement · 728×90 px

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಉಡುಪಿ ಘಟಕದ ಆಶ್ರಯದಲ್ಲಿ ಸುಸಂಸ್ಕೃತ ಸಮಾಜವನ್ನು ರೂಪಿಸಲು ಅವಿರತ ಶ್ರಮಿಸುವ ಸಮಸ್ತ ಗುರುವೃಂದದ ಗೌರವಾರ್ಥವಾಗಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸನ್ಮಾನ ಮತ್ತು ಸಂವಾದ ಕಾರ್ಯಕ್ರಮ 'ಬದಲಾವಣೆಯತ್ತ ಶಿಕ್ಷಣ ನೀತಿ' ಯುವವಾಹಿನಿಯ ಸಭಾಂಗಣ ಬಲಾಯಿಪಾದೆ, ಉದ್ಯಾವರದಲ್ಲಿ ಜರಗಿತು.

ಸಂಪನ್ಮೂಲ ವ್ಯಕ್ತಿಯಾಗಿ ಶಿಕ್ಷಕರಾದ ದೀಪಕ್ ಕೆ. ಬೀರ‌ ಭಾಗವಹಿಸಿದ್ದರು.

ಸಮಾರಂಭದಲ್ಲಿ ಯು. ಕಮಲಬಾಯಿ ಹೈಸ್ಕೂಲ್ ಕಡಿಯಾಳಿಯ ನಿವೃತ್ತ ಮುಖ್ಯ ಶಿಕ್ಷಕ ಎನ್.ಎಮ್.ಪೂಜಾರಿ ಮತ್ತು ಶ್ರೀ ಮಹಾದೇವಿ ಹೈಸ್ಕೂಲ್ ಕಾಪು ನಿವೃತ್ತ ಶಿಕ್ಷಕ ಮೋಹನ್ ಸುವರ್ಣರನ್ನು ಸನ್ಮಾನಿಸಲಾಯಿತು. ಉಡುಪಿ ಘಟಕದ ಸದಸ್ಯ ಶಿಕ್ಷಕರನ್ನು ಗೌರವಿಸಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ.) ಉಡುಪಿ ಘಟಕದ ಅಧ್ಯಕ್ಷರಾದ ಜಗದೀಶ್ ಕುಮಾರ್ ವಹಿಸಿದ್ದರು. ಕಾರ್ಯಕ್ರಮ ಸಂಚಾಲಕರಾದ ಶಿಕ್ಷಕಿ ಶ್ರೀಮತಿ ಅಮಿತಾಂಜಲಿ ಮತ್ತು ಉಪನ್ಯಾಸಕ ದಯಾನಂದ ಕರ್ಕೇರ, ಕಾರ್ಯದರ್ಶಿ ಮಾಲತಿ ಅಮೀನ್, ಮಹಿಳಾ ಸಂಚಾಲಕಿ ಕುಮಾರಿ ನವೀಷ ಮತ್ತು ಯುವವಾಹಿನಿಯ ಸದಸ್ಯ ಶಿಕ್ಷಕ ವೃಂದ ಉಪಸ್ಥಿತರಿದ್ದರು.

Related news

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ
General

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ

28 Oct 2026

ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್