Billava Warriors – Billava News Portal
Wednesday, 28 October 2026
General News

ಶ್ರಾವ್ಯ ಆರ್. ಅಂಚನ್ "ಸರಸ್ವತಿ ಪುರಸ್ಕಾರ" ರಾಜ್ಯ ಪ್ರಶಸ್ತಿಗೆ ಆಯ್ಕೆ

27 Nov 2023
ಶ್ರಾವ್ಯ ಆರ್. ಅಂಚನ್ "ಸರಸ್ವತಿ ಪುರಸ್ಕಾರ" ರಾಜ್ಯ ಪ್ರಶಸ್ತಿಗೆ ಆಯ್ಕೆ

ಪಡುಬಿದ್ರಿಯ ರವಿರಾಜ್ ಕೋಟ್ಯಾನ್ ಮತ್ತು ಶ್ಯಾಮಲಾ ದಂಪತಿಯ ಪುತ್ರಿಯಾದ ಶ್ರಾವ್ಯ ಆರ್. ಅಂಚನ್ ಸಾಂಸ್ಕೃತಿಕ, ಕ್ರೀಡಾ, ಶೈಕ್ಷಣಿಕ ರಂಗದಲ್ಲಿ ಮುಂದಿದ್ದು, ಪಡುಬಿದ್ರಿ ಸಾಗರ್ ವಿದ್ಯಾ ಮಂದಿರದ ಶಾಲೆಯ ವಿದ್ಯಾರ್ಥಿಯಾಗಿ ಕಬಡ್ಡಿ ಕ್ರೀಡೆಯಲ್ಲಿ 2 ಬಾರಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೂ ಆಯ್ಕೆಯಾದವರು. 2019-20ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 613 (98.08%)ಅಂಕ ಪಡೆದಿರುವ ಇವರ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಶ್ರೀಮತಿ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನ ದಾವಣಗೆರೆ-ಸಾಲಿಗ್ರಾಮ ಇವರು ನೀಡಲ್ಪಡುವ "ಸರಸ್ವತಿ ಪುರಸ್ಕಾರ" ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಕನ್ನಡ ರಾಜ್ಯೋತ್ಸವದಂದು ದಾವಣಗೆರೆಯ ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆಯ ಆವರಣದಲ್ಲಿ ಈ ಪ್ರಶಸ್ತಿಯನ್ನು ಪಡೆಯಲಿದ್ದಾರೆ.

Related news

General

Test

28 Oct 2026

test

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್