Billava Warriors – Billava News Portal
Thursday, 29 October 2026
Advertiser
Advertisement · 728×90 px
General News

ಹೆಲ್ಮೆಟ್‌ನಲ್ಲಿ ಕ್ಯಾಮರಾ ಹಾಕಿ ಓಡಾಡಿದರೆ ಪರವಾನಗಿ ರದ್ದು : ದ್ವಿಚಕ್ರ ವಾಹನ ಸವಾರರೆ ಎಚ್ಚರ...!

27 Nov 2023
ಹೆಲ್ಮೆಟ್‌ನಲ್ಲಿ ಕ್ಯಾಮರಾ ಹಾಕಿ ಓಡಾಡಿದರೆ ಪರವಾನಗಿ ರದ್ದು : ದ್ವಿಚಕ್ರ ವಾಹನ ಸವಾರರೆ ಎಚ್ಚರ...!
Advertiser
Advertisement · 728×90 px

ಹೆಲ್ಮೆಟ್‌ನಲ್ಲಿ ಅಳವಡಿಸಿ ದ್ವಿಚಕ್ರವಾಹನ ಸವಾರಿ ಮಾಡುವುದು ಸಾಮಾನ್ಯವಾಗಿದೆ. ಆದರೆ ಕೇರಳದ ಸಾರಿಗೆ ಇಲಾಖೆ ಹೆಲ್ಮೆಟ್‌ನಲ್ಲಿಕ್ಯಾಮರಾ ಅಳವಡಿಸಿ ಸಂಚರಿಸುವ ದ್ವಿಚಕ್ರವಾಹನ ಸವಾರರಿಗೆ ಖಡಕ್ ಎಚ್ಚರಿಕೆ ನೀಡಿದೆ.

ಇನ್ನು ಮುಂದೆ ಹೆಲ್ಮೆಟ್‌ನಲ್ಲಿ ಕ್ಯಾಮರಾ ಕಂಡುಬಂದರೆ 1000 ರೂಪಾಯಿ ದಂಡ, ಮೊದಲ ಎಚ್ಚರಿಕೆ ನೀಡಿ ಬಳಿಕವೂಮರುಕಳಿಸಿದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಸಂಚಾರ ಆಯುಕ್ತರು ಹೇಳಿದ್ದಾರೆ. ಇದಲ್ಲದೆ ಎಚ್ಚರಿಕೆಯಹೊರತಾಗಿಯೂ ಅಕ್ರಮ ಮುಂದುವರಿದರೆ ಮೂರು ತಿಂಗಳವರೆಗೆ ಪರವಾನಗಿ ರದ್ದುಪಡಿಸಲು ಆಯುಕ್ತರು ಆದೇಶ ನೀಡಿದ್ದಾರೆ.

ಹೆಲ್ಮೆಟ್‌ಗೆ ಕ್ಯಾಮೆರಾ ಅಳವಡಿಸುವುದರಿಂದ ಸಾರ್ವಜನಿಕರಿಗೆ, ವಾಹನ ಸವಾರರಿಗೆ, ಅವರ ಖಾಸಗಿತನಕ್ಕೆ ಅಪಾಯವಿದೆ ಎಂಬದೂರುಗಳು ಕೇಳಿ ಬಂದಿದ್ದವು. ಇದಕ್ಕೂ ಮುನ್ನ ಹೆಲ್ಮೆಟ್ ಕ್ಯಾಮೆರಾ ಬಳಸಿ ವಿಡಿಯೋ ಚಿತ್ರೀಕರಣ ಮಾಡುವುದು ಕಂಡು ಬಂದರೆವಾಹನ ದಾಖಲೆ ಮತ್ತು ಪರವಾನಗಿ ರದ್ದುಪಡಿಸಲಾಗುವುದು ಎಂದು ಮೋಟಾರು ವಾಹನ ಇಲಾಖೆ ತಿಳಿಸಿತ್ತು.

Related news

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ
General

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ

28 Oct 2026

ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್