Billava Warriors – Billava News Portal
Wednesday, 28 October 2026
General News

7 ಕೋಟಿ ವಂಚಿಸಿದ ಆರೋಪ : ಚೈತ್ರಕುಂದಾಪುರ ಬಂಧನ

27 Nov 2023
7 ಕೋಟಿ ವಂಚಿಸಿದ ಆರೋಪ : ಚೈತ್ರಕುಂದಾಪುರ ಬಂಧನ

7 ಕೋಟಿ ವಂಚಿಸಿದ ಆರೋಪ : ಚೈತ್ರಕುಂದಾಪುರ ಬಂಧನ

ಉಡುಪಿ: ಬೈಂದೂರಿನ ಬಿಜೆಪಿ ಮುಖಂಡ, ಗೋವಿಂದ ಬಾಬು ಪೂಜಾರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದಟಿಕೆಟ್ ಕೊಡಿಸುವುದಾಗಿ ನಂಬಿಸಿ ಸಂಗಡಿಗರೊಂದಿಗೆ ಸೇರಿಕೊಂಡು ಸುಮಾರು 7 ಕೋಟಿ ವಂಚಿಸಿದ ಆರೋಪ ಎದುರಿಸುತ್ತಿರುವಚೈತ್ರ ಕುಂದಾಪುರ ತಡರಾತ್ರಿ ಬೆಂಗಳೂರು ಸಿಸಿಬಿ ಪೊಲೀಸರು ಬಲೆಗೆ ಬಿದ್ದಿದ್ದಾಳೆ. ಕಳೆದ ಕೆಲದಿನಗಳಿಂದ ತಲೆಮರೆಸಿಕೊಂಡಿದ್ದ ಚೈತ್ರಕುಂದಾಪುರಳನ್ನು ಉಡುಪಿಯ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಮಂಗಳವಾರ ರಾತ್ರಿ ಬೆಂಗಳೂರಿನ ಸಿಸಿಬಿ ಪೊಲೀಸರುಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಈಕೆಯ ಜೊತೆಗೆ ಮತ್ತಿಬ್ಬರು ಆರೋಪಿಗಳನ್ನೂ ವಶಕ್ಕೆಪಡೆಯಲಾಗಿದೆ. ಸದ್ಯ ಪ್ರಕರಣದಲ್ಲಿ ಚೈತ್ರ ಜೊತೆಗೆ ಪ್ರಸಾದ್, ಗಗನ್ ಕಡೂರು, ಪ್ರಜ್ವಲ್ ಶೆಟ್ಟಿ ಆರ್ ಎಸ್ ಧನರಾಜ್, ರಮೇಶ್, ಶ್ರೀಕಾಂತ್ ರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Related news

General

Test

28 Oct 2026

test

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್