Billava Warriors – Billava News Portal
Thursday, 29 October 2026
Advertiser
Advertisement · 728×90 px
General News

ಪ್ರೀತಿಯಿಂದ ಕುಡ್ಲದ ಜನತೆ ಮನಗೆದ್ದೆ ಭಾವುಕರಾಗಿ ನುಡಿದ ಎಸಿಪಿ ಮಹೇಶ್‌ಕುಮಾರ್ ಮಂಗಳೂರು ನಾಗರಿಕ ಸಮಿತಿಯಿಂದ ಬೀಳ್ಕೊಡುಗೆ

4 Feb 2024
ಪ್ರೀತಿಯಿಂದ ಕುಡ್ಲದ ಜನತೆ ಮನಗೆದ್ದೆ  ಭಾವುಕರಾಗಿ ನುಡಿದ ಎಸಿಪಿ ಮಹೇಶ್‌ಕುಮಾರ್ ಮಂಗಳೂರು ನಾಗರಿಕ ಸಮಿತಿಯಿಂದ ಬೀಳ್ಕೊಡುಗೆ
Advertiser
Advertisement · 728×90 px

ಮಂಗಳೂರು: ಮಂಗಳೂರು ಜನರನ್ನು ಕಾನೂನು ಮತ್ತು ಪ್ರೀತಿಯಿಂದ ಮಾತ್ರ ಗೆಲ್ಲಲು ಸಾಧ್ಯ. ಕರಾವಳಿ ಜನತೆಗೆ ಪ್ರೀತಿ ಕೊಟ್ಟರೆ ಅವರು ನೂರುಪಟ್ಟು ಪ್ರೀತಿ ತೋರಿಸುತ್ತಾರೆ. ಭಾವುಕರಾಗಿ ನುಡಿದವರು ಮಂಗಳೂರು ಸೆಂಟ್ರಲ್ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಮಹೇಶ್‌ಕುಮಾರ್.

ಕೊಡಗಿಗೆ ವರ್ಗಾವಣೆಗೊಂಡ ಅವರನ್ನು ಮಂಗಳೂರು ನಾಗರಿಕ ಸಮಿತಿ ವತಿಯಿಂದ ಭಾನುವಾರ ಆಯೋಜಿಸಲಾದ ಅದ್ದೂರಿ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.

ಪೊಲೀಸ್ ಕೆಲಸದ ಜತೆಗೆ ಸಾಮಾಜಿಕ ಚಟುವಟಿಕೆಯಿಂದ ನಾನು ಜೀವನದಲ್ಲಿ ಖುಷಿ ಕಂಡಿದ್ದೇನೆ. ಮಂಗಳೂರು ಸರ್ವಧರ್ಮಗಳ ನೆಲೆಬೀಡು ಆಗಬೇಕು ಎನ್ನುವುದು ನಮ್ಮೆಲ್ಲರ ಕನಸು. ಈ ಸೌಹಾರ್ದದ ಮಂಗಳೂರಿನ ಗತವೈಭವ ಸಾರಲು ನಾವೆಲ್ಲ ಪ್ರಯತ್ನಿಸಬೇಕು ಎಂದು ಕಿವಿಮಾತು ಹೇಳಿದರು.

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಮಾತನಾಡಿ, ಒಳ್ಳೆಯ ಕೆಲಸ ಮಾಡುವವರನ್ನು ಗುರುತಿಸಿ ಗೌರವಿಸುವುದು ನಮ್ಮೆಲ್ಲರ ಕರ್ತವ್ಯ. ಮಹೇಶ್‌ಕುಮಾರ್ ಒಬ್ಬ ದಕ್ಷ, ಪ್ರಾಮಾಣಿಕ, ಜನಸ್ನೇಹಿ ಅಧಿಯಾಗಿರುವ ಜತೆಗೆ ತಮ್ಮ ಸಾಮಾಜಿಕ ಚಟುವಟಿಕೆಗಳ ಮೂಲಕ ಅನೇಕ ಮಂದಿಯ ಕಣ್ಣೀರೊರೆಸಿದ್ದಾರೆ. ಕರಾವಳಿಯ ಮೂಲೆಮೂಲೆಯ ಕಲಾವಿದರನ್ನು ಗುರುತಿಸಿ ಅವರಿಗೊಂದು ವೇದಿಕೆ ಕಲ್ಪಿಸುವ ಮೂಲಕ ಕಲಾಮಾಣಿಕ್ಯರಾಗಿದ್ದರು ಎಂದು ಶ್ಲಾಘಿಸಿದರು.

ಮಾಜಿ ಮೇಯರ್ ಶಶಿಧರ ಹೆಗ್ಡೆ ಮಾತನಾಡಿ, ನಿಷ್ಠೆ, ಪ್ರಬುದ್ಧತೆ, ಪ್ರಾಮಾಣಿಕತೆಯಿಂದಾಗಿ ಎಸಿಪಿ ಮಹೇಶ್‌ಕುಮಾರ್ ಮಂಗಳೂರಿನ ಜನತೆಯ ಮನಗೆದ್ದಿದ್ದಾರೆ. ಇಂದು ಇಂತಹ ಅಧಿಕಾರಿಗಳ ಅನಿವಾರ್ಯತೆ ಇದೆ ಎಂದರು.

ಗಾಯಕರಾರ ರಮೇಶ್ಚಂದ್ರ, ಸಂಯುಕ್ತ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಅಧ್ಯಕ್ಷ ಕೆ.ಕೆ.ನೌಷಾದ್, ಡಿವೈಎಸ್‌ಪಿ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಡಾ.ಅಮರಶ್ರೀ ಅಮರನಾಥ ಶೆಟ್ಟಿ, ಜಯಪ್ರಕಾಶ್ ರೈ, ಕರಾವಳಿ ಸಂಗೀತ ಕಲಾವಿದರ ಒಕ್ಕೂಟ ಉಪಾಧ್ಯಕ್ಷ ಐವನ್ ಡಿಸೋಜ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಉದ್ಯಮಿ ಶೈಲೇಂದ್ರ ವೈ ಸೂವರ್ಣ, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಪೂಜಾರಿ ಮೊದಲಾದವರಿದ್ದರು. ತೋನ್ಸೆ ಪುಷ್ಕಳ್‌ಕುಮಾರ್ ಸ್ವಾಗತಿಸಿದರು. ಆರ್.ಜೆ. ಅಭಿಷೇಕ್ ಕಾರ್ಯಕ್ರಮ ನಿರೂಪಿಸಿದರು.

ಪುಷ್ಪವೃಷ್ಟಿಗೈದು ಭಾವುಕರಾದರು ನಾಗರಿಕರು, ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಎಸಿಪಿ ಮಹೇಶ್‌ಕುಮಾರ್ ಅವರನ್ನು ಗೌರವಿಸಲಾಯಿತು.

Related news

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ
General

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ

28 Oct 2026

ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್