Billava Warriors – Billava News Portal
Wednesday, 28 October 2026
General News

ಮಾನ್ಯ ಸಂಸದರು ಶಾಸಕರುಗಳಿಗೆ. ಕೋಟಿ ಚೆನ್ನಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮಂಗಳೂರು" ಎಂಬ ಹೆಸರಿನಿಂದ ನಾಮಕರಣ ಮಾಡುವ ಕುರಿತು ಮನವಿ :

16 Dec 2023

ಮಾನ್ಯ ಸಂಸದರು ಶಾಸಕರುಗಳಿಗೆ.!

ಮಂಗಳೂರು ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ "ಕೋಟಿ ಚೆನ್ನಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮಂಗಳೂರು" ಎಂಬ ಹೆಸರಿನಿಂದ ನಾಮಕರಣ ಮಾಡುವ ಕುರಿತು ಮನವಿ.

✒️ ಪ್ರಶಾಂತ್ ಪೂಜಾರಿ ಮಸ್ಕತ್, ಪಜೀರ್

ಮೇಲ್ಕಾಣಿಸಿದ ವಿಷಯಕ್ಕೆ ಸಂಬಂಧಿಸಿದಂತೆ ನಿವೇದಿಸಿಕೊಳ್ಳುವುದೇನೆಂದರೆ ಸುಮಾರು ಐದು ಶತಮಾನಗಳ ಹಿಂದೆ ತುಳುನಾಡ ಮಣ್ಣಲ್ಲಿ ಅವತಾರ ತಾಳಿ ತಮ್ಮ ಜೀವಿತಾವಧಿಯ ಕಾಲದಲ್ಲಿಯೇ 66 ಗರಡಿ ಮತ್ತು 33 ತಾವು ಗಳನ್ನು ನಿರ್ಮಿಸಿ ಸತ್ಯ, ಧರ್ಮಕ್ಕಾಗಿ ಹೋರಾಡಿ ಅಮರರಾದ ಕಾಯ ಬಿಟ್ಟು ಮಹಾ ಶಕ್ತಿಗಳಾಗಿ ಬ್ರಹ್ಮೈಖ್ಯರಾದ ಕೋಟಿ ಚೆನ್ನಯರನ್ನು ಇಂದಿಗೂ ಕರ್ನಾಟಕದ ಕರಾವಳಿ ಭಾಗ, ಮಡಿಕೇರಿ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲದೆ ನೆರೆಯ ರಾಜ್ಯವಾದ ಮಹರಾಷ್ಟ್ರದ ಮುಂಬೈ, ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಸೇರಿದಂತೆ ವಿವಿಧ ಧರ್ಮದವರು ಸುಮಾರು 260 ಕ್ಕೂ ಹೆಚ್ಚು ಗರಡಿಗಳನ್ನು ನಿರ್ಮಿಸಿ ಕೋಟಿ ಚೆನ್ನಯರನ್ನು ಆರಾಧಿಸುತ್ತಿದ್ದು, ಸದರಿ ಗರಡಿಗಳಿಗೆ ಜಾತಿ ಭೇದ ಮರೆತು ಜಾತ್ರಮಹೋತ್ಸವ ಹಾಗೂ ಇನ್ನಿತರ ಕಾರ್ಯಕ್ರಮಗಳಿಗೆ ಲಕ್ಷಾಂತರ ಭಕ್ತರು ಭಾಗವಹಿಸುತ್ತಾರೆ. ನಾಡಿನಾದ್ಯಂತ ದೇಶ, ವಿದೇಶಗಳಲ್ಲಿ ಕೋಟ್ಯಾಂತರ ಭಕ್ತರಿರುತ್ತಾರೆ. ಮಂಗಳೂರು ನಗರದ ಹೃದಯ ಭಾಗದಲ್ಲಿರುವ ಕಂಕನಾಡಿ ಶ್ರೀ ಬ್ರಹ್ಮಬೈದರ್ಕಳ ಗರೋಡಿ ಕ್ಷೇತ್ರದ ವರ್ಷಂಪ್ರತಿ ಜಾತ್ರೆಗೆ ಜಾತಿ ಭೇದ ಮರೆತು ಲಕ್ಷಾಂತರ ಭಕ್ತರು ದೇಶ ವಿದೇಶಗಳಿಂದ ಆಗಮಿಸುವ ಭಕ್ತಜನ ಸಮೂಹವೇ ಇದಕ್ಕೆ ಸಾಕ್ಷಿಯಾಗಿರುತ್ತದೆ.

           ಪ್ರಸ್ತುತ ಕೋಟಿ ಚೆನ್ನಯರು ಹುಟ್ಟಿ ಬೆಳೆದ ಸ್ಥಳವಾದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪಡುಮಲೆಯ ಗೆಜ್ಜೆಗಿರಿ ನಂದನ ಬಿತ್ತ್'ಲ್ ಎಂಬಲ್ಲಿ ಮೂಲಸ್ಥಾನ ಗರಡಿ 2020 ರ ಫೆಬ್ರುವರಿ 28 ರಂದು ಪ್ರತಿಷ್ಠಾ ಬ್ರಹ್ಮಕಲಶೋತ್ಸವದೊಂದಿಗೆ ಲೋಕಾರ್ಪಣೆಗೊಂಡಿದೆ. ಈ ಕಾರ್ಯಕ್ರಮದಲ್ಲಿ 15 ಲಕ್ಷಕ್ಕೂ ಅಧಿಕ ಭಕ್ತರು ಪಾಲ್ಗೊಂಡಿದ್ದು ಇದು ತುಳುನಾಡಿನ ಇತಿಹಾಸ ಪುಟದಲ್ಲಿ ಚರಿತ್ರೆ ನಿರ್ಮಾಣ ಆಗಿತ್ತು. ಈ ಸಂದರ್ಭದಲ್ಲಿ ಅವರುಗಳ ಭಕ್ತಾದಿಗಳೆಲ್ಲರ ಅಭಿಲಾಷೆಯಂತೆ, ಸರ್ವ ಧರ್ಮೀಯರು ಆರಾಧಿಸುವ ಆರಾಧ್ಯ ಪುರುಷರು, ಅವಳಿ ವೀರರೆಂದು ವಿರಾಜಮಾನರಾಗಿರುವ ಕೋಟಿ ಚೆನ್ನಯರ ಹೆಸರು ವಿಶ್ವ ಮಟ್ಟದಲ್ಲಿ ಬೆಳಗುವಂತೆ ಮಾಡಲು ಮಂಗಳೂರು ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ *"ಕೋಟಿ ಚೆನ್ನಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮಂಗಳೂರು"*  ಎಂಬ ಹೆಸರಿನಲ್ಲಿ ನಾಮಕರಣಗೊಳಿಸಿ ಆದೇಶ ಹೊರಡಿಸುವಂತೆ ಸಂಬಂಧಪಟ್ಟ ಇಲಾಖೆಗೆ ಸೂಚಿಸುವಂತೆ ವಿನಯ ಪೂರ್ವಕವಾಗಿ ವಿನಂತಿಸುತ್ತೇವೆ.

ನಾಲ್ಕು ವರ್ಷಗಳ ಹಿಂದೆ...

ಗಮನಕ್ಕೆ :-1, ಬಜಪೆ ವಿಮಾನ ನಿಲ್ದಾಣದ ಸ್ಥಳೀಯ ಮಳವೂರು ಗ್ರಾಮ ಪಂಚಾಯತ್ ನ ನಿರ್ಣಯ ಪ್ರತಿಯನ್ನು ಲಗತ್ತಿಸಲಾಗಿದೆ.

2, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ನೇತೃತ್ವದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡಲು ಸಾಮಾನ್ಯ ಸಭೆಯಲ್ಲಿ ಸರ್ವಾನುಮತದ ನಿರ್ಣಯ ಕೈಗೊಂಡು ಪ್ರಸ್ತಾವಣೆಯು ರಾಜ್ಯ ಸರಕಾರಕ್ಕೆ ಸಲ್ಲಿಕೆಯಾಗಿದೆ..

ಆದುದರಿಂದ ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳಿಗೆ ತಾವುಗಳು ಶ್ರೀ ಕೋಟಿ ಚೆನ್ನಯರ ಹೆಸರನ್ನು ಮಂಗಳೂರು ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡುವಂತೆ ಇದೇ ಬರುವ ವಿಧಾನ ಮಂಡಲದ ಅಧಿವೇಶನದಲ್ಲಿ ಶಿಫಾರಸು ಮಾಡುವ ನಿರ್ಧಾರವನ್ನು ಕೈಗೊಳ್ಳುವಂತೆ ಮನವಿ..

Related news

General

Test

28 Oct 2026

test

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್