Billava Warriors – Billava News Portal
Wednesday, 28 October 2026
General News

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು - ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ

28 Apr 2026

ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ ಅಡಚಣೆಯುಂಟುಮಾಡುತ್ತಿದ್ದ ವಿದ್ಯುತ್ ತಂತಿಗಳನ್ನು ತೆರವುಗೊಳಿಸಿ, ಭೂಗತ ಕೇಬಲ್ ಅಳವಡಿಸುವ 67 ಕೋಟಿ ರೂಪಾಯಿ ವೆಚ್ಚದ ಬೃಹತ್ ಯೋಜನೆಗೆ ಸರ್ಕಾರ ಮಂಜೂರಾತಿ ನೀಡಿದೆ.

​ಪ್ರತಿ ವರ್ಷ ಮಂಗಳೂರು ದಸರಾ ಮೆರವಣಿಗೆಯ ಸಂದರ್ಭದಲ್ಲಿ ಸಾಲು ಸಾಲಾಗಿ ಸಾಗುವ ಎತ್ತರದ ಸ್ತಬ್ಧಚಿತ್ರಗಳು ಮತ್ತು ರಥಗಳಿಗೆ ರಸ್ತೆಯ ಮೇಲ್ಭಾಗದಲ್ಲಿ ಹಾದುಹೋಗಿದ್ದ ವಿದ್ಯುತ್ ತಂತಿಗಳು ದೊಡ್ಡ ಅಡಚಣೆಯಾಗಿದ್ದವು. ಸುರಕ್ಷತೆಯ ದೃಷ್ಟಿಯಿಂದ ಮೆರವಣಿಗೆಯ ಸಮಯದಲ್ಲಿ ನಗರದ ಹಲವು ಭಾಗಗಳಲ್ಲಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುವುದು ಅನಿವಾರ್ಯವಾಗಿತ್ತು. ಇದರಿಂದಾಗಿ ಸಾರ್ವಜನಿಕರಿಗೆ ಹಾಗೂ ಸ್ಥಳೀಯ ವ್ಯಾಪಾರಿಗಳಿಗೆ ಸಾಕಷ್ಟು ತೊಂದರೆಯಾಗುತ್ತಿತ್ತು. ಈ ಗಂಭೀರ ಸಮಸ್ಯೆಯನ್ನು ಮನಗಂಡ ಕುದ್ರೋಳಿ ಕ್ಷೇತ್ರದ ಆಡಳಿತ ಮಂಡಳಿ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಮೂಲಕ ಸರ್ಕಾರಕ್ಕೆ ವಿಶೇಷ ಮನವಿ ಸಲ್ಲಿಸಿತ್ತು.

ಈ ಸಮಸ್ಯೆಯ ಗಂಭೀರತೆಯನ್ನು ಅರಿತ ಯು.ಟಿ. ಖಾದರ್ ಅವರು ಆಲಿಸಿ, ಇದನ್ನು ಕೇವಲ ಒಂದು ಧಾರ್ಮಿಕ ಕಾರ್ಯಕ್ರಮವನ್ನಾಗಿ ನೋಡದೆ ಮಂಗಳೂರಿನ ಘನತೆಯ ಪ್ರಶ್ನೆಯಾಗಿ ಸ್ವೀಕರಿಸಿ, ಇಂಧನ ಸಚಿವರೊಂದಿಗೆ ಸತತ ಸಂಪರ್ಕ ಸಾಧಿಸಿ, ಬೃಹತ್ ಯೋಜನೆಗೆ ಅನುಮೋದನೆ ದೊರಕಿಸಿಕೊಡುವಲ್ಲಿ ಅವರು ವಹಿಸಿದ ಪಾತ್ರ ಅಮೋಘ. ಟೆಂಡರ್ ಪ್ರಕ್ರಿಯೆಯನ್ನು ವಿಳಂಬವಿಲ್ಲದೆ ಪೂರ್ಣಗೊಳಿಸಿ, ಕಾಮಗಾರಿ ಆರಂಭಕ್ಕೆ ಹಸಿರು ನಿಶಾನೆ ತೋರುವ ಮೂಲಕ ತಮ್ಮ 'ಕಾರ್ಯದಕ್ಷತೆ'ಯನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ ಎಂದು ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ ತಿಳಿಸಿದ್ದಾರೆ

ಈ ಐತಿಹಾಸಿಕ ಯೋಜನೆಯ ಜಾರಿಗೆ ಸಹಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್, ಇಂಧನ ಸಚಿವ ಕೆ.ಜೆ. ಜಾರ್ಜ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಎಂಎಲ್‌ಸಿ ಮಂಜುನಾಥ ಭಂಡಾರಿ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

​ಈ ಯೋಜನೆಯಿಂದಾಗಿ ಮುಂದಿನ ದಿನಗಳಲ್ಲಿ ವಿದ್ಯುತ್ ಅಪಘಾತಗಳ ಭಯವಿಲ್ಲದೆ ಮೆರವಣಿಗೆ ಸುಗಮವಾಗಿ ಸಾಗಲಿದ್ದು, ಮಳೆಗಾಲದಲ್ಲಿ ಮರಗಳು ಬಿದ್ದು ವಿದ್ಯುತ್ ವ್ಯತ್ಯಯವಾಗುವ ಸಮಸ್ಯೆಗೂ ಮುಕ್ತಿ ಸಿಗಲಿದೆ. ಅಷ್ಟೇ ಅಲ್ಲದೆ, ರಸ್ತೆಗಳಲ್ಲಿ ವಿದ್ಯುತ್ ತಂತಿಗಳ ಜಾಲವಿಲ್ಲದೆ ಮಂಗಳೂರು ನಗರವು ಮತ್ತಷ್ಟು ಸುಂದರವಾಗಿ ಕಂಗೊಳಿಸಲಿದೆ. ಈ ಮಹತ್ವದ ಕಾಮಗಾರಿಯು ಶೀಘ್ರದಲ್ಲೇ ಆರಂಭಗೊಳ್ಳಲಿದೆ ಎಂದು ತಿಳಿಸಿದ್ದಾರೆ.

Related news

General

Test

28 Oct 2026

test

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್