Billava Warriors – Billava News Portal
Wednesday, 28 October 2026
General News

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ.

ಸ್ಪರ್ಧೆಯಲ್ಲಿ 5ರಿಂದ 7ನೇ ತರಗತಿ, 8ರಿಂದ 10ನೇ ತರಗತಿ ಹಾಗೂ ಪಿಯುಸಿ-ಪದವಿ ವಿದ್ಯಾರ್ಥಿಗಳಿಗೆ ಮೂರು ವಿಭಾಗಗಳಿದ್ದು, ಎಲ್ಲ ಸಮಾಜದ ವಿದ್ಯಾರ್ಥಿಗಳಿಗೂ ಮುಕ್ತ ಅವಕಾಶವಿದೆ. ಎರಡು ಗಂಟೆಗಳ ಕಾಲ ನಡೆಯುವ ಸ್ಪರ್ಧೆಗೆ ನೋಂದಣಿ ಸ್ಥಳದಲ್ಲೇ ಮಾಡಿಕೊಳ್ಳಬಹುದು ಎಂದರು.

ಪ್ರತಿ ವಿಭಾಗದಲ್ಲಿ ಪ್ರಥಮ, ದ್ವಿತೀಯ, ತೃತೀಯ ಹಾಗೂ ಚತುರ್ಥ ಸ್ಥಾನಗಳಿಗೆ ಕ್ರಮವಾಗಿ ರೂ.5,000, ರೂ.3,000, ರೂ.2,000 ಹಾಗೂ ರೂ.1,000 ನಗದು ಬಹುಮಾನ, ಸ್ಮರಣಿಕೆ ನೀಡಲಾಗುವುದು. ಐದು ಸಮಾಧಾನಕರ ಬಹುಮಾನಗಳಿದ್ದು, ಎಲ್ಲ ಸ್ಪರ್ಧಾಳುಗಳಿಗೂ ಪ್ರಮಾಣಪತ್ರ ನೀಡಲಾಗುವುದು ಎಂದರು .

ಸುದ್ದಿಗೋಷ್ಠಿಯಲ್ಲಿ ಸಂಘದ ಪ್ರಮುಖರಾದ ಲೋಕನಾಥ ಅಮೀನ್, ಜೀವನ್ ಕುಮಾರ್ ತೊಕ್ಕೊಟ್ಟು, ಎ.ಜೆ. ಶೇಖರ್ ಹಾಗೂ ಸುಮಲತಾ ಉಪಸ್ಥಿತರಿದ್ದರು

Related news

General

Test

28 Oct 2026

test

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಜನರ ಪ್ರೀತಿಯ ನಾಯಕ ಪದ್ಮರಾಜ್ ಆರ್. ಪೂಜಾರಿ

8 Aug 2026

ಸರಳತೆ • ಸೇವೆ • ಮಾನವೀಯತೆ • ಜನಪರ ಕಾಳಜಿ ಜನರ ನೋವು–ನಲಿವುಗಳಿಗೆ ಸ್ಪಂದಿಸುತ್ತಾ, ಸಮಾಜದ ಒಳಿತಿಗಾಗಿ ಸದಾ ಮುಂಚೂಣಿಯಲ್ಲಿ ನಿಂತು, ಸೇವೆ ಮತ್ತು ಮಾನವೀಯತೆಯ ಮೂಲಕ ಜನಮನದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಾಯಕ. ಜನರಿಗಾಗಿ ಸದಾ ಮುಂಚೂಣಿಯಲ್ಲಿ… ಜನರ ಧ್ವನಿಯಾಗಿ, ಜನರ ಆಶಾಕಿರಣವಾಗಿ… ❤️ ಜನಮನ ಗೆದ್ದ ನಾಯಕ – ಪದ್ಮರಾಜ್ ಆರ್. ಪೂಜಾರಿ 🌹🙏 ಸೇವೆ ಮುಂದುವರಿಯಲಿ…