Billava Warriors – Billava News Portal
Wednesday, 28 October 2026
General News

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ "ವಿಕಾಸ ಪುಸ್ತಕ ಬಹುಮಾನ"

6 Jan 2025

ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ' ಪುಸ್ತಕ ಬಹುಮಾನಕ್ಕೆ, ಅನಿತಾ ಪಿ. ತಾಕೊಡೆ ಅವರ ಸುವರ್ಣಯುಗ ಕೃತಿ  ಆಯ್ಕೆಯಾಗಿದೆ. ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಜಿ.ಎನ್.ಉಪಾಧ್ಯ, ಪ್ರತಿಷ್ಠಾನದ ಸಂಸ್ಥಾಪಕರಾದ ಡಾ.ವಿಶ್ವನಾಥ ಕಾರ್ನಾಡ್, ಕೋಶಾಧಿಕಾರಿ ಶರತ್ ಕಾರ್ನಾಡ್ ಅವರ ಉಪಸ್ಥಿತಿಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು

ಈ ಪುರಸ್ಕಾರವು ನಗದು ಪುರಸ್ಕಾರ, ಪ್ರಶಸ್ತಿ ಪತ್ರ ಹಾಗೂ ಗ್ರಂಥ ಗೌರವವನ್ನು ಒಳಗೊಂಡಿದ್ದು ಫೆಬ್ರವರಿ ತಿಂಗಳಲ್ಲಿ ಮುಂಬೈ ವಿಶ್ವವಿದ್ಯಾಲಯದಲ್ಲಿ ಈ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ ಎಂಬುದಾಗಿ ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.

ಅನಿತಾ ಪೂಜಾರಿಯವರು ಕವಿಯಾಗಿ, ಲೇಖಕರಾಗಿ, ಕಥೆಗಾರರಾಗಿ ಸಾಹಿತ್ಯ ಕ್ಷೇತ್ರದಲ್ಲಿ ಪರಿಚಿತರಾಗಿದ್ದಾರೆ. ಇವರು  ಕೆ.ಎಸ್.ಒ.ಯು. ಮೈಸೂರು ವಿಶ್ವವಿದ್ಯಾಲಯದಲ್ಲಿ ಬಿ.ಎ. ಪದವಿ ಪಡೆದಿದ್ದಾರೆ. ಮುಂಬೈ ವಿಶ್ವವಿದ್ಯಾಲಯದಲ್ಲಿ ಎಂ.ಎ. ಪದವಿಯನ್ನು ಪ್ರಥಮ ರ್ಯಾಂಕ್‍ನೊಂದಿಗೆ ಪಡೆಯುವುದರ ಮೂಲಕ ಎಂ.ಬಿ.ಕುಕ್ಯಾನ್ ಬಂಗಾರದ ಪದಕದ ಅರ್ಹತೆಯನ್ನು ಸಾಧಿಸಿದ್ದಾರೆ. ಇದೀಗ ಮುಂಬಯಿ ವಿಶ್ವವಿದ್ಯಾಲಯದಲ್ಲಿ ಡಾ.ಜಿ. ಎನ್. ಉಪಾಧ್ಯ ಅವರ ಮಾರ್ಗದರ್ಶನದಲ್ಲಿ “ಮುಂಬಯಿ ಬಿಲ್ಲವರು ಸಾಂಸ್ಕೃತಿಕ ಅಧ್ಯಯನ” ಈ ವಿಷಯದ ಕುರಿತು ಪಿಎಚ್.ಡಿ ಅಧ್ಯಯನದಲ್ಲಿ ನಿರತರಾಗಿದ್ದಾರೆ. ಈಗಾಗಲೇ ಅನಿತಾ ಅವರ ಒಟ್ಟು ಎಂಟು ಕೃತಿಗಳು ಲೋಕಾರ್ಪಣೆಗೊಂಡಿವೆ.

ಪಿಎಚ್.ಡಿ ಕೋರ್ಸ್ ವರ್ಕ್ ನ ಸಲುವಾಗಿ ಜಯ ಸಿ. ಸುವರ್ಣರ ಕುರಿತು ಸಿದ್ಧಪಡಿಸಿದ ‘ಸುವರ್ಣಯುಗ’ ಶೋಧ ಪ್ರಬಂಧಕ್ಕೆ ಮುಂಬೈ ವಿಶ್ವವಿದ್ಯಾಲಯದ ವತಿಯಿದ ಸಂಶೋಧಕಿ ಡಾ.ಲೀಲಾ ಬಿ. ಅವರು ಕೊಡಮಾಡುವ ‘ಶೋಧಸಿರಿ’ ಪುರಸ್ಕಾರ, ನಿವಾಳಿಸಿ ಬಿಟ್ಟ ಕೋಳಿ ಕಥಾಕವನಸಂಕಲನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕೊಡಮಾಡುವ 2022ನೆಯ ಸಾಲಿನ ಕೆ. ವಸುದೇವಾಚಾರ್ಯ ದತ್ತಿ ಪ್ರಶಸ್ತಿ  ಮಾಣಿಕ್ಯ ಪ್ರಕಾಶನದ ವತಿಯಿಂದ ಪದ್ಮಾವತಿ ವೆಂಕಟೇಶ ದತ್ತಿ ಪುರಸ್ಕಾರ, ‘ಅಂತರಂಗದ ಮೃದಂಗ’ದ ಹಸ್ತಪ್ರತಿಗೆ, ಜಗಜ್ಯೋತಿ ಕಲಾವೃಂದ ಮುಂಬೈ ವತಿಯಿಂದ ‘ಶ್ರೀಮತಿ ಸುಶೀಲಾ ಎಸ್. ಶೆಟ್ಟಿ ಸ್ಮಾರಕ ಕಾವ್ಯ ಪ್ರಶಸ್ತಿ’, ಜನಸ್ಪಂದನ ಟ್ರಸ್ಟ್(ರಿ) ಸುವ್ವಿ ಪಬ್ಲಿಕೇಷನ್ಸ್, ಶಿಕಾರಿಪುರ ಕೊಡಮಾಡುವ ‘ಅಲ್ಲಮ ಸಾಹಿತ್ಯ ಪ್ರಶಸ್ತಿ’, ಕನ್ನಡ ಕಲರವ ಮತ್ತು ಅವ್ವ ಪುಸ್ತಕಾಲಯದ ವತಿಯಿಂದ ‘ಸೃಜನಶೀಲ ಸಾಹಿತಿ ಪ್ರಶಸ್ತಿ’ ಲಭಿಸಿದೆ. ಮೋಹನ ತರಂಗ’ ಈ ಕೃತಿಗೆ 2019-20ನೆಯ ಸಾಲಿನ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ನಗದು ಪುರಸ್ಕಾರ ಪ್ರಾಪ್ತಿಯಾಗಿದೆ. ಗ್ರಾಮಾಂತರ ಬುದ್ಧಿಜೀವಿಗಳ ಬಳಗ ವತಿಯಿಂದ  ಎರಡು ಬಾರಿ ‘ಪ್ರೇಮಕಾವ್ಯ ಪುರಸ್ಕಾರ’ ಹಾಗೂ ‘ವಿಶ್ವ ಕವಿ ಕುವೆಂಪು ಕಾವ್ಯ ಪುರಸ್ಕಾರ’ ಲಭಿಸಿದೆ.

ಮಹಾರಾಷ್ಟ್ರ ನವಚಿಂತನ ಸಂಸ್ಥೆಯಿಂದ ಕವಿರತ್ನ ಪುರಸ್ಕಾರ, ಮುಂಬಯಿ ಕಲಾಜಗತ್ತು ಸಂಸ್ಥೆಯ ವತಿಯಿಂದ ‘ದಿ ಗೋಪಾಲಕೃಷ್ಣ ಸ್ಮಾರಕ ಪ್ರಶಸಿ’್ತ, ಡೊಂಬಿವಲಿ ತುಳುಕೂಟದ ವತಿಯಿಂದ ‘ತುಳುಸಿರಿ ಪ್ರಶಸ್ತಿ’, ಕನ್ನಡ ಕವಿವಾಣಿ ಪತ್ರಿಕಾ ಬಳಗದ ವತಿಯಿಂದ  ‘ಕಾವ್ಯಸಿರಿ ಪ್ರಶಸ್ತಿ’, ಕಲಾ ಸೌರಭ ಮುಂಬಯಿ ವತಿಯಿಂದ ‘ಅಮೃತ ಸೌರಭ ಪುರಸ್ಕಾರ’, ಶ್ರೀಕೃಷ್ಣ ವಿಠ್ಠಲ ಪ್ರತಿಷ್ಠಾನದ ವತಿಯಿಂದ ‘ಶ್ರೀ ಕೃಷ್ಣ ವಿಠ್ಠಲ ಪ್ರಶಸ್ತಿ’ ಲಭಿಸಿದೆ. ಇವರು 2019ರಲ್ಲಿ  ಮೈಸೂರು ಅರಮನೆಯಲ್ಲಿ ನಡೆದ ವಿಶ್ವವಿಖ್ಯಾತ ದಸರಾ ಕವಿಗೋಷ್ಠಿಯಲ್ಲೂ ಭಾಗವಹಿಸಿ ಗೌರವ ಪುರಸ್ಕಾರವನ್ನು ಪಡೆದಿರುತ್ತಾರೆ. ಇವರ ಕತೆ ಕವಿತೆಗಳಿಗೆ ಲಭಿಸಿದ ಹಲವಾರು ಬಹುಮಾನ, ಪುರಸ್ಕಾರಗಳು ಇವರ ಸಾಹಿತ್ಯ ಶಕ್ತಿಗೆ ಸಾಕ್ಷಿಯಾಗಿವೆ. ಪ್ರಸ್ತುತ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ(ರಿ)ಇದರ ಕಾರ್ಯಕಾರಿ ಸಮಿತಿಯ ಸದಸ್ಯರಾಗಿದ್ದಾರೆ.

ಮುಂಬಯಿ ಮತ್ತು ಮಂಗಳೂರು ಆಕಾಶವಾಣಿಯಲ್ಲಿ ಇವರ ಕತೆ, ಭಾವಗೀತೆ ಮತ್ತು ಕವನಗಳು ಪ್ರಸಾರಗೊಂಡಿವೆ. ಇವರು 2019ರಲ್ಲಿ  ಮೈಸೂರು ಅರಮನೆಯಲ್ಲಿ ನಡೆದ ವಿಶ್ವವಿಖ್ಯಾತ ದಸರಾ ಕವಿಗೋಷ್ಠಿಯಲ್ಲೂ ಭಾಗವಹಿಸಿ ಗೌರವ ಪುರಸ್ಕಾರವನ್ನು ಪಡೆದಿದ್ದಾರೆ. ಪ್ರಸ್ತುತ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ(ರಿ)ಇದರ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Related news

General

Test

28 Oct 2026

test

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್