Billava Warriors – Billava News Portal
Thursday, 29 October 2026
Advertiser
Advertisement · 728×90 px
General News

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ

23 Jun 2025
Advertiser
Advertisement · 728×90 px

ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ.

ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್ 2  ರಂದು ಪ್ರಕಟವಾದ "ಹುಲಿ ವೇಷಕ್ಕೆ ಖದರ್ ನೀಡಿದ್ದ ಆಸಿಫ್" ಎಂಬ ವರದಿಗೆ ಪ್ರಶಸ್ತಿ ಲಭಿಸಿದೆ.

ಪ್ರಶಸ್ತಿಯು 5,001 ರು., ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆ ಒಳಗೊಂಡಿದೆ..

ಸಿಸಿಆರ್ ಬಿ  ಎಸಿಪಿ ಗೀತಾ ಕುಲಕರ್ಣಿ, ಹಿರಿಯ ಪತ್ರಕರ್ತ ಜೈದೀಪ್ ಶೆಣೈ, ಪತ್ರಿಕೋದ್ಯಮ ಉಪನ್ಯಾಸಕ ಗುರುಪ್ರಸಾದ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ ತೀರ್ಪು ಗಾರರಾಗಿದ್ದರು ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪರಿಚಯ:  ಹೊಸದಿಗಂತ ಮೂಲಕ ಪತ್ರಿಕೋದ್ಯಮ ಪ್ರವೇಶಿಸಿ ವಿಜಯ ಕರ್ನಾಟಕದಲ್ಲಿ 20 ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ.

2019-20ನೇ ಸಾಲಿನ ಪ.ಗೋ.  ಪ್ರಶಸ್ತಿ,  2022ರಲ್ಲಿ  ಕಲಬುರಗಿಯಲ್ಲಿ  ನಡೆದ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ ಡ್ರಗ್ಸ್ ಸಂಬಂಧಿತ ಸ್ಕೂಪ್ ವರದಿಗೆ ಬಿ.ಎಸ್. ವೆಂಕಟರಾಂ ರಾಜ್ಯ ಪ್ರಶಸ್ತಿ,  ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ನೀಡುವ ಪ್ರತಿಷ್ಠಿತ `ಅಭಿಮಾನಿ ದತ್ತಿ ಪ್ರಶಸ್ತಿ' ಲಭಿಸಿದೆ. ಇವರು

ನೀರುಮಾರ್ಗ ಪಡು ಬೊಂಡಂತಿಲ ಗ್ರಾಮದ ಗೋಪಾಲ ಪೂಜಾರಿ ಮತ್ತು ಕಮಲ ದಂಪತಿಯ ಪುತ್ರ.

ಪ್ರಶಸ್ತಿ ಪ್ರದಾನ ಸಮಾರಂಭ: ಜೂ.25ರಂದು ಬೆಳಗ್ಗೆ 11 ಗಂಟೆಗೆ ಪತ್ರಿಕಾಭವನದಲ್ಲಿ ಮಂಗಳೂರು ಪೊಲೀಸ್‌ ಕಮಿಷನರ್‌ ಸುಧೀರ್ ಕುಮಾರ್ ರೆಡ್ಡಿ ಪ್ರಶಸ್ತಿ ಪ್ರದಾನ ಮಾಡುವರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್‌ ಇಂದಾಜೆ ಅಧ್ಯಕ್ಷತೆ ವಹಿಸುವರು. ಪ್ರೆಸ್‌ ಕ್ಲಬ್‌ ಅಧ್ಯಕ್ಷ ಪಿ.ಬಿ.ಹರೀಶ್‌ ರೈ, ಪತ್ರಿಕಾಭವನ ಟ್ರಸ್ಟ್‌ ಅಧ್ಯಕ್ಷ ರಾಮಕೃಷ್ಣ ಆರ್.‌ ಉಪಸ್ಥಿತರಿರುವರು.

Related news

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ
General

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ

28 Oct 2026

ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್