Billava Warriors – Billava News Portal
Thursday, 29 October 2026
Advertiser
Advertisement · 728×90 px
General News

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ

25 Jun 2025
Advertiser
Advertisement · 728×90 px

ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ 'ಬ್ಯಾಂಡ್ ಮಂಗಳೂರು' ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್ ಪಡು ಆಯ್ಕೆಯಾಗಿದ್ದು ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024ರ ಅ.2ರಂದು ಪ್ರಕಟವಾಗಿದ್ದ 'ಹುಲಿ ವೇಷಕ್ಕೆ ಖದರ್ ನೀಡಿದ್ದ ಆಸಿಫ್' ವರದಿಗೆ ಪ್ರಶಸ್ತಿ ಲಭಿಸಿದೆ.

ಇಂದು ಜೂ.25 ಬೆಳಗ್ಗೆ 11 ಗಂಟೆಗೆ ಪತ್ರಿಕಾ ಭವನದಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಪ್ರಶಸ್ತಿ ಪ್ರದಾನಿಸಿದರು.

ಹೊಸದಿಗಂತ ಪತ್ರಿಕೆ ಮೂಲಕ ಪತ್ರಿಕೋದ್ಯಮ ಪ್ರವೇಶಿಸಿದ್ದ ವಿಜಯ ಕೋಟ್ಯಾನ್ ವಿಜಯ ಕರ್ನಾಟಕದಲ್ಲಿ 22 ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. 2019-20ನೇ ಸಾಲಿನ ಪ.ಗೋ. ಪ್ರಶಸ್ತಿ, 2022ರಲ್ಲಿ ಕಲಬುರಗಿಯಲ್ಲಿ ನಡೆದ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ ಡ್ರಗ್ಸ್ ಸಂಬಂಧಿತ ಸ್ಕೂಪ್ ವರದಿಗೆ ಬಿ.ಎಸ್. ವೆಂಕಟರಾಂ ರಾಜ್ಯ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ನೀಡುವ ಪ್ರತಿಷ್ಠಿತ 'ಅಭಿಮಾನಿ ದತ್ತಿ ಪ್ರಶಸ್ತಿ' ಲಭಿಸಿದೆ. ನೀರುಮಾರ್ಗ ಪಡು ಬೊಂಡಂತಿಲ ಗ್ರಾಮದ ಗೋಪಾಲ ಪೂಜಾರಿ ಮತ್ತು ಕಮಲ ದಂಪತಿಯ ಪುತ್ರ.

Related news

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ
General

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ

28 Oct 2026

ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್