Billava Warriors – Billava News Portal
Wednesday, 28 October 2026
General News

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ...!! ಸುಭಾಷ್ ಪೂಜಾರಿ

16 Aug 2024

ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ - ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು.

ಈ ಸಮಯದಲ್ಲಿ ಶಾಲೆಗೆ ಬ್ರಹತ್ ಮೊತ್ತದ ಕೊಡುಗೆ ನೀಡಿದ ಶಾಲೆಯ ಹಳೆ ವಿಧ್ಯಾರ್ಥಿ ಮತ್ತು ಉದ್ಯಮಿಗಳಾದ ಸುಭಾಷ್ ಪೂಜಾರಿಯವರು 9 ಲಕ್ಷದ ಮೌಲ್ಯದ ಶಾಲಾ ವಾಹನವನ್ನು ಶಾಲೆಗೆ ಹಸ್ತಾಂತರಿಸಿದರು. ವೇದಿಕೆಯಲ್ಲಿ ದಾನಿಗಳಾದ ಸುಭಾಷ್ ಪೂಜಾರಿ ಹಾಗೂ ಶಾಲೆಯ ವಾಹನ ಇಂಧನ ವ್ಯೆವಸ್ಥೆ ಮಾಡಿದ ರಾಜೇಶ್ ಪೂಜಾರಿ ಇವರನ್ನು ಕೂಡಾ ಸನ್ಮಾನಿಸಲಾಯಿತು.

ಈ ಸಮಯದಲ್ಲಿ ಶಾಲೆಗೆ ಮಕ್ಕಳ ಸಂಖ್ಯೆ ಕಡಿಮೆಯಾಗಿದ್ದು ಊರಿನ ಪ್ರತಿಯೊಬ್ಬರು ಸರಕಾರಿ ಶಾಲೆ ಉಳಿಸುವಲ್ಲಿ ಯಶಸ್ವಿಯಾಗ ಬೇಕೆಂದರೆ ಶಾಲೆಗೆ ಮಕ್ಕಳ ಸಂಖ್ಯೆ ಹೆಚ್ಚಿಸುವಲ್ಲಿ ನಿಮ್ಮ ಪಾತ್ರ ಮುಖ್ಯವಾಗಿರುತ್ತದೆ ಎಂದು ಮುಖ್ಯ ಅತಿಥಿಗಳಾಗಿ ಆಗಮಿಸಿದ ವಲಯ ಶಿಕ್ಷಣ ಸಂಯೋಜಕರಾದ ಚಂದ್ರ ದೇವಾಡಿಗ ಹೇಳಿದರು.

ಮುಖ್ಯ ಅತಿಥಿಗಳಾಗಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಬಾಬು ಹೆಗ್ಡೆ, ಶಂಕರ ಪೂಜಾರಿ, ಬಿ.ಜೆ.ಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಹಳೆ ವಿಧ್ಯಾರ್ಥಿ ಸಂಘದ ಅಧ್ಯಕ್ಷ ಮಂಜುನಾಥ ಪೂಜಾರಿ, ಕಾರ್ಯದರ್ಶಿ ಸುಧಾಕರ ಮೋಗವೀರ, ಎಸ್.ಡಿ.ಎಂ.ಸಿ  ಸದಸ್ಯೆ ನಾಗವೇಣಿ, ವಿಧ್ಯಾರ್ಥಿ ನಾಯಕ ವಿನಿತ್ ಕುಮಾರ್, ಉಪಸ್ಥಿತರಿದ್ದರು ಶಾಲಾ ಮುಖ್ಯೋಪಾಧ್ಯಾಯರಾದ ಮುಕ್ತಾ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹಶಿಕ್ಷಕಿ ಸಾರೀಕಾ ನಿರೂಪಿಸಿದರು, ಸಂಗೀತ ವಂದಿಸಿದರು...

Related news

General

Test

28 Oct 2026

test

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್