Billava Warriors – Billava News Portal
Wednesday, 28 October 2026
General News

ಬಂಟ್ವಾಳ ಬಿ. ಸಿ. ರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ವೃತ್ತ ತೆರವು

27 May 2024

ಬಂಟ್ವಾಳ: ಬಿ.ಸಿ.ರೋಡಿನ ಪ್ರಮುಖ ಲ್ಯಾಂಡ್ ಮಾರ್ಕ್ ಎನಿಸಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣ ಗುರು ವೃತ್ತವು ಹೆದ್ದಾರಿ ಅಭಿವೃದ್ಧಿ ಕಾಮಗಾರಿಯ‌ ಹಿನ್ನೆಲೆಯಲ್ಲಿ ತೆರವುಗೊಂಡಿದೆ.

ನಾರಾಯಣ ಗುರು ವೃತ್ತದ ನಿರ್ಮಾಣ ಹಾಗೂ ನಿರ್ವಹಣೆಯನ್ನು ಬಂಟ್ವಾಳ ತಾಲೂಕು ಬಿಲ್ಲವ ಸಂಘ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಸಂಘಕ್ಕೆ ಮಾಹಿತಿ ನೀಡಿ ತೆರವು ಕಾರ್ಯ ನಡೆದಿದೆ. ಮುಂದೆ ಅದೇ ಪ್ರದೇಶದಲ್ಲಿ ಹೊಸ ವೃತ್ತವನ್ನು ನಿರ್ಮಿಸಿ ನಾರಾಯಣ ಗುರುಗಳ ಹೆಸರನ್ನಿಡುವ ಭರವಸೆಯನ್ನೂ ನೀಡಿದ್ದಾರೆ.

ಇಂದು ವೃತ್ತವನ್ನು ತೆರವು ಮಾಡುವ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ, ಕಾರ್ಯದರ್ಶಿ ರಮೇಶ್ ತುಂಬೆ, ಕೋಶಾಧಿಕಾರಿ ಆನಂದ ಸಾಲಿಯಾನ್ ಶಂಭೂರು ಉಪಸ್ಥಿತರಿದ್ದರು. ಸಂಬಂಧಪಟ್ಟ ಅಧಿಕಾರಿಗಳು ಸಂಘದ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಸೇರಿದಂತೆ ಹಲವರನ್ನು ಸಂಪರ್ಕಿಸಿ ಸರ್ಕಲ್ ತೆರವಿಗೆ ಅನುಮತಿ ಕೇಳಿ ಮತ್ತೆ ನಿರ್ಮಿಸಿಕೊಡುವ ಭರವಸೆ ನೀಡಿದ್ದಾರೆ.

Related news

General

Test

28 Oct 2026

test

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್